ಬಾಳೆಹೊನ್ನೂರು: ಆರನೇ ವರ್ಷದ ದಸರಾ ವೈಭವ ಕ್ರೀಡಾಕೂಟ ಆಯೋಜನೆ

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಹೋಬಳಿಯ ಕರ್ಕೇಶ್ವರ ಕೈಮರದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಆರನೇ ವರ್ಷದ ದಸರಾ ವೈಭವ ಕ್ರೀಡಾಕೂಟ ಆಯೋಜಿಸಲಾಗಿತ್ತು.

 

ಇದನ್ನೂ ಓದಿ; ಐಒಸಿಎಲ್‌ ನಲ್ಲಿ ಉದ್ಯೋಗಾವಕಾಶ; 1720‌ ಹುದ್ದೆಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಇಲ್ಲಿದೆ ಮಾಹಿತಿ

ಪ್ರತಿ ವರ್ಷದಂತೆ ಈ ವರ್ಷವು ಪುರುಷ ಮತ್ತು ಮಹಿಳೆಯರಿಗೆ ಕ್ರೀಡಾಕೂಟಗಳು ಆಯೋಜಿಸಿದ್ದು, ಪುರುಷರಿಗೆ ಮಿಕ್ಸ್ ಕಬಡ್ಡಿ, ಶಟಲ್ ಬ್ಯಾಟಮೀಟನ್, ಹಾಗೂ ಮಿಕ್ಸ್ ಹಗ್ಗ ಜಗ್ಗಾಟ ಸ್ಪರ್ಧೆ ಹಾಗೂ ಮಹಿಳೆಯರಿಗೆ ಮ್ಯೂಸಿಕಲ್ ಚೇರ್, ಮಡಿಕೆ ಒಡೆಯುವುದು ಹಾಗೂ ಲೆಮನ್ ಆಂಡ್ ಸ್ಪೂನ್ ಸ್ಪರ್ಧೆ ಮತ್ತು ಮಕ್ಕಳಿಗೆ ಬಲೂನ್ ಒಡೆಯುವುದು ಹಾಗೂ ಮ್ಯೂಸಿಕಲ್ ಚೇರ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

 

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 21.10.223

ಈ ಕಾರ್ಯಕ್ರಮಕ್ಕೆ ಕರ್ಕೇಶ್ವರ ಕೈಮರ ಪಂಚಾಯಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಶ್ರೀಚಾಮುಂಡೇಶ್ವರಿ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಗೆಳೆಯರ ಬಳಗ ಮತ್ತು ಊರಿನ ಎಲ್ಲಾ ಗ್ರಾಮಸ್ಥರು ವಿಜೃಂಭಣೆಯಿಂದ ಈ ದಸರಾ ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು.

 

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ವಿಫಲ- ಸುಧಾಕರ ಶೆಟ್ಟಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ಕಾಂಗ್ರೆಸ್ ಸರ್ಕಾರ ನೀಡಿದ್ದ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಟೀಕಿಸಿದರು.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಗ್ಯಾರಂಟಿಗಳೇ ಕಾರಣ. ಅದರೆ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಭರವಸೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಿಲ್ಲ. ಜೊತೆಗೆ ಗ್ಯಾರಂಟಿ ಅನುಷ್ಠಾನದಲ್ಲೇ ಬ್ಯುಸಿಯಾಗಿರುವ ಸರ್ಕಾರ ಜನರಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಮಾಡುವಂತೆ ಒತ್ತಾಯ:
ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿ 2.13 ಕೋಟಿ ಮಹಿಳೆಯರು ನೋಂದಣಿಯಾಗಿದ್ದಾರೆ. ಮೊದಲ ಕಂತಿನಲ್ಲಿ 1 ಕೋಟಿ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ರೂ. ನೀಡಲಾಗಿದೆ. ಉಳಿದವರಿಗೆ ಬ್ಯಾಂಕ್ ಖಾತೆಗೆ ಜಮೆ ಮಾಡಿಲ್ಲ. 2 ನೇ ಕಂತಿನಲ್ಲಿ 80 ಲಕ್ಷ ಮಹಿಳೆಯರಿಗೆ ಮಾತ್ರ ಹಣ ಜಮೆಯಾಗಿದೆ. ಕೂಡಲೇ ಸರ್ಕಾರ ಸಮರ್ಪಕವಾಗಿ ಹಣ ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಮೂರು ಸಾವಿರ ಹಾಗೂ ಡಿಪ್ಲೊಮಾ ಮುಗಿಸಿದ ವಿದ್ಯಾರ್ಥಿಗಳಿಗೆ 1500 ರೂ. ಪ್ರತಿ ತಿಂಗಳು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಯೋಜನೆ ಜಾರಿಗೊಳಿಸಿಲ್ಲ. ಇದರಿಂದ ವಿದ್ಯಾವಂತ ನಿರುದ್ಯೋಗಿಗಳು, ಹತಾಶರಾಗಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆದರೆ ಗ್ರಾಮೀಣ ಪ್ರದೇಶದ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಖಾಸಗಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರು. ಈಗ ನಾವು ಐದು ಕೆ.ಜಿ. ಅಕ್ಕಿ ನೀಡುತ್ತೇವೆ, ಕೇಂದ್ರ ಸರ್ಕಾರ ಐದು ಕೆ.ಜಿ. ಅಕ್ಕಿ ನೀಡಲಿದೆ. ನಂತರ ಅಕ್ಕಿಯ ಬದಲು ಹಣ ಪಡಿತರ ಚೀಟಿದಾರರ ಖಾತೆಗೆ ಹಾಕುವುದಾಗಿ ಹೇಳಿದರು. ಮೊದಲ ತಿಂಗಳಲ್ಲಿ ಹಣ ಜಮೆ ಮಾಡಲಾಗಿದ್ದು, ಎರಡು ತಿಂಗಳಿಂದ ಹಣ ಜಮೆಯಾಗಿಲ್ಲ ಎಂದು ದೂರಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.