ಉಚಿತ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆ- ರಂಭಾಪುರಿ ಶ್ರೀ

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.

 

ಇದನ್ನೂ ಓದಿ; ಬಹು ಕೋಟಿ bmw ಕಾರು ಖರೀದಿಸಿದ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಭಲ ಆಕಾಂಕ್ಷಿ; ಯಾರದು..? ಏನಿದರ ವಿಶೇಷ.. ಇದರ ಬೆಲೆ ಎಷ್ಟು ಕೋಟಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೇಸ್ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳಿಗೆ ಮುಕ್ಕಾಲು ಭಾಗ ಹಣ ಖರ್ಚಾಗುವುದರಿಂದ ಅಭಿವೃದ್ಧಿ ಸ್ಥಗಿತಗೊಂಡಿದೆ. ಯೋಜನೆಗಳ ಮೊರೆ ಹೋಗಿ ದುಡಿಯುವ ಜನರು ಕೂಡ ಸೋಮಾರಿಗಳಾಗಿದ್ದಾರೆ. ಧಾರ್ಮಿಕ ಕ್ಷೇತ್ರ ಅಲ್ಲದೇ ರಾಜ್ಯದ ಯಾವ ಅಭಿವೃದ್ಧಿ ಕೆಲಸಗಳಿಗೂ ಹಣ ಬಿಡುಗಡೆ ಆಗುತ್ತಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕು. ಜಾತಿಯ ತುಷ್ಟಿಕರಣ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು?

ಜಯಪುರ: ಸ್ಪಂದನ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

 

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಕುಟುಂಬದ ಆರ್ಥಿಕ ಸಮಸ್ಯೆಯ ಕಾರಣಕ್ಕಾಗಿ ಗುಣ ಮಟ್ಟದ ಶಿಕ್ಷಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸ್ಪಂದನ ಸಂಸ್ಥೆ, ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳನ್ನು ನೀಡುತ್ತಿದ್ದು, ಇವುಗಳನ್ನು ಸದುಪಯೋಗಿಸಿಕೊಂಡು ಉತ್ತಮ ಅಂಕಗಳಿಸಬೇಕು ಎಂದು ಸ್ಪಂದನ ಸಂಸ್ಥೆಯ ಅದ್ಯಕ್ಷ ಕಿಬ್ಳಿ ಪ್ರಸನ್ನ ಕುಮಾರ್ ಹೇಳಿದರು.

ಇದನ್ನೂ ಓದಿ; ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ

 

ಶಾಂತಿಗ್ರಾಮ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ಹಣಕಾಸಿನ ಕೊರತೆ ವಿದ್ಯಾರ್ಥಿಗಳ ಕಲಿಕೆಗೆ ದುಷ್ಪರಿಣಾಮ ಬೀರಬಾರದು. ಈ ಕಾರಣದಿಂದ ಸ್ಪಂದನ ಸಂಸ್ಥೆಯ ಸದಸ್ಯರು ಹಾಗೂ ನಮ್ಮ ಸ್ನೇಹಿತರ ಸಹಕಾರದಿಂದ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಬ್ಯಾಗ್, ನೋಟ್ ಬುಕ್ ಸೇರಿದಂತೆ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸುತ್ತಿದ್ದು ಇವುಗಳನ್ನು ಉಪಯೋಗಿಸಿಕೊಂಡು ಉತ್ತಮ ಶಿಕ್ಷಣ ಪಡೆದು, ಒಳ್ಳೆಯ ಉದ್ಯೋಗ ಪಡೆದು ನಿಮ್ಮೂರಿನ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಇದೇ ರೀತಿಯ ಸಹಾಯ ಮಾಡಬೇಕು ಎನ್ನುವುದು ನಮ್ಮ ಸಂಸ್ಥೆಯ ಅಪೇಕ್ಷೆಯಾಗಿದೆ ಎಂದರು.

ಇದನ್ನೂ ಓದಿ; ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ

ಶಾಲೆಯ ಮುಖ್ಯ ಶಿಕ್ಷಕಿ ಹುರ್ಮತ್ ಉನ್ನೀಸಾ ಮಾತನಾಡಿ, ಶಾಲೆಗೆ ಬರುವವರು ಬಹುತೇಕ ಬಡ ವಿದ್ಯಾರ್ಥಿಗಳು. ಕುಗ್ರಾಮದಲ್ಲಿರುವ ನಮ್ಮ ಶಾಲೆಯನ್ನು ಗುರುತಿಸಿ ಶೈಕ್ಷಣಿಕ ಪರಿಕರಗಳನ್ನು ನೀಡುತ್ತಿರುವುದಕ್ಕೆ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತಾವಿದ್ಯಾರ್ಥಿಗಳು ಈ ಬಾರಿ ಉತ್ತಮ ಅಂಕಗಳನ್ನು ಪಡೆಯುವತ್ತ ಗಮನ ಹರಿಸಬೇಕು ಹಾಗಾದಾಗ ಮಾತ್ರ ಸ್ಪಂದನ ಸಂಸ್ಥೆಯ ಕಾರ್ಯಕ್ಕೆ ಬೆಲೆ ಸಿಗುತ್ತದೆ ಎಂದರು.

ಇದನ್ನೂ ಓದಿ; ಚಿನ್ನದ ಬೆಲೆ ಏರಿಕೆ, ಬೆಳ್ಳಿ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

ಕಾರ್ಯಕ್ರಮದಲ್ಲಿ ಸ್ಪಂದನ ಸಂಸ್ಥೆಯ ಸದಸ್ಯೆ ಡಾ. ಯಶಸ್ವಿನಿ ಕೃಷ್ಣ ಪ್ರಸಾದ್, ಜೇಸಿಐ ಬಿಳಾಲುಕೊಪ್ಪದ ಪೂರ್ವಾದ್ಯಕ್ಷ ಅರುಣ್ ಕುಮಾರ್, ಸಾಮಾಜಿಕ ಕಾರ್ಯಕರ್ತ ಸಂತೋಷ್ ಮೇಗೂರು ಹಾಗೂ ವಿದ್ಯಾರ್ಥಿಗಳು ಅದ್ಯಾಪಕರಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.