ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಹಾವೇರಿ ಕ್ಷೇತ್ರದಿಂದ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಅಸಮಾಧಾನಗೊಂಡ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯವ ಘೋಷಣೆ ಈಗಾಗಲೇ ಮಾಡಿದ್ದು, ಮಠ, ದೇವಾಲಯಗಳ ಭೇಟಿ, ಅಭಿಮಾನಿಗಳ ಸಭೆ ಹೀಗೆ ಚುನಾವಣಾ ಕಾರ್ಯದಲ್ಲಿ ಈಶ್ವರಪ್ಪ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಇಲ್ಲ ಫ್ರೀ ಕರೆಂಟ್

ಇಂದು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈ ಪವಿತ್ರ ಕ್ಷೇತ್ರದಲ್ಲಿ ಕೆಟ್ಟ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ಆ ಪಾಪವನ್ನು ಹೊತ್ತುಕೊಳ್ಳಲು ನಾನು ಸಿದ್ಧನಿಲ್ಲ ಎಂದು ಹೇಳಿದರು.
ಇದನ್ನೂ ಓದಿ; ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಹಿಂದಿದ್ದಾರೆ ಮಲೆನಾಡಿನ ಇಬ್ಬರು; ಟೋಪಿಯಲ್ಲಿದ್ದ ಕೂದಲಿನಿಂದ ಸಿಕ್ಕಿತು ಮಹತ್ವದ ಸುಳಿವು
“ನನ್ನ ಚುನಾವಣಾ ಸ್ಪರ್ಧೆ 100ಕ್ಕೆ 100 ಖಚಿತ. ನಾನು ಯಾವ ಸಂಧಾನಕ್ಕೂ ಒಪ್ಪುವುದಿಲ್ಲ. ಯಡಿಯೂರಪ್ಪನವರ ಬಗ್ಗೆ ಏನೇ ಇದ್ದರೂ ಹೊರಗಡೆ ಮಾತನಾಡುತ್ತೇನೆ” ಎಂದು ತಿಳಿಸಿದರು. ಈ ಮೂಲಕ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಖಚಿತಪಡಿಸಿದರು.
IPL ಬೆಟ್ಟಿಂಗ್ ಆಡೋರಿಗೆ ಕವಿತೆ ಮೂಲಕ ಜಾಗೃತಿ ಮೂಡಿಸಿದ ಪೊಲೀಸರು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಿನ್ನೆಯಿಂದ IPL ಪಂದ್ಯಾವಳಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಖಾಕಿ ಫುಲ್ ಅಲರ್ಟ್ ಆಗಿದ್ದು, ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಲು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕವಿತೆ ಮೂಲಕ ಡಿಫರೆಂಟ್ ಜಾಗೃತಿ ಮೂಡಿಸಿದೆ.
“ಬೆಟ್ಟಿಂಗ್ ಆಡಿ ಬಿಡ್ಬೇಡ್ರೋ ನಿಮ್ ಊರು, ಸಿಕ್ಕಾಂಕೊಂಡು ಕೆಡಿಸ್ಕೋಬೇಡಿ ನಿಮ್ ಹೆಸರು. ನಮ್ಮ ಕೈಗೆ ಸಿಕ್ರೆ ನಿಮ್ ಜೀವನ ಹುಷಾರು. ಈ ಸಲ ಕಪ್ ನಮ್ದೇ ಎಂಬ ಕೂಗು ಜೋರು. ಸುಮ್ನೆ ಆಟ ಎಂಜಾಯ್ ಮಾಡು ದೇವರು. ಅಭಿಮಾನಕ್ಕೆ ಹೆಸರು ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು,” ಎಂದು RCB ಯನ್ನ ಹೊಗಳುತ್ತಲೇ ಬೆಟ್ಟಿಂಗ್ ಚೋರರಿಗೆ ಖಾಕಿ ಬಿಸಿ ಮುಟ್ಟಿಸಿದೆ.
ಇದನ್ನೂ ಓದಿ; ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
IPL ಬೆಟ್ಟಿಂಗ್ ಕುರಿತು ಪೊಲೀಸರ ಹೊಸ ರೀತಿಯ ಜಾಗೃತಿಗೆ ಜಿಲ್ಲೆಯಾದ್ಯಂತ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.












