ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಭಾರತದ ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರ ನಿಧನಕ್ಕೆ ಬಾಳೆಹೊನ್ನೂರು ರಂಭಾಪುರಿ ಶ್ರೀಗಳು ಸಂತಾಪ ವ್ಯಕ್ತಪಡಿಸಿದ್ಧಾರೆ.
ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಎಸ್.ಎಂ ಕೃಷ್ಣ:
ರಾಜ್ಯದ ಅಭಿವೃದ್ಧಿಗೆ ಎಸ್ ಎಂ ಕೃಷ್ಣ ಅವರ ಕೊಡುಗೆ ಅಪಾರವಾಗಿದ್ದು, ರಂಭಾಪುರಿ ಮಠದ ಗುರು ವಿರಕ್ತರ ಸಮಾವೇಶಕ್ಕೆ ಎಸ್ ಎಮ್ ಕೃಷ್ಣ ಆಗಮಿಸಿದ್ದರು. ಮಠದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಅವರ ನೆನಪು ಇನ್ನೂ ಹಸಿರಾಗಿದೆ.

ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್

ಅವರ ಸರಳ, ಸಜ್ಜನಿಕೆ, ಸೌಜನ್ಯದ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿತ್ತು. ಕೇಂದ್ರದ ಮಂತ್ರಿಯಾಗಿ, ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಅವರ ಕಾರ್ಯ ಎಂದಿಗೂ ಸ್ಮರಣೀಯ. ಅವರ ಅಗಲಿಕೆಯ ದುಃಖವನ್ನು ತಡೆಯುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ರಂಭಾಪುರಿ ಜಗದ್ಗುರು ಸಂತಾಪ ಸಲ್ಲಿಸಿದ್ಧಾರೆ.
ಬೆಂಗಳೂರಿನ ತಮ್ಮ ಸದಾಶಿವನಗರದ ನಿವಾಸದಲ್ಲಿ ಬೆಳಗಿನ ಜಾವ 2:30ಕ್ಕೆ ರ್ನಾಟಕದ ಮಾಜಿ ಮುಖ್ಯಮಂತ್ರಿ, ಭಾರತದ ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಮೃತರಾಗಿದ್ದು, ಈ ಹಿನ್ನಲೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಜೊತೆಗೆ ಡಿಸೆಂಬರ್ 11 ಅಂದರೆ ನಾಳೆ ರಾಜ್ಯದಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಿ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಹುಟ್ಟೂರಿನಲ್ಲಿ ಅಂತ್ಯಕ್ರಿಯೆ:
ಎಸ್‌ಎಂ ಕೃಷ್ಣ ಅವರ ಪಾರ್ಥೀವ ಶರೀರರವನ್ನು ಇಂದು ಅವರ ಸ್ವರ್ಗಹದಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. ಬಳಿಕ ನಾಳೆ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಅವರ ಅಂತ್ಯಕ್ರಿಯೆ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಎಸ್‌ಎಂ ಕೃಷ್ಣ ಅವರ ಹುಟ್ಟೂರು ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಅಲ್ಲದೇ ಡಿಸೆಂಬರ್ 10, 11 ಮತ್ತು 12ರಂದು 3 ದಿನಗಳ ಕಾಲ ರಾಜ್ಯದಲ್ಲಿ ಶೋಕವನ್ನು ಆಚರಿಸಲಾಗುವುದು.
ಈ ವೇಳೆ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಅಲ್ಲದೇ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!

ಇದನ್ನೂ ಓದಿ; ಹೋಂ ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ; 10th ಪಾಸ್ ಆಗಿರುವವರು ಈಗಲೇ ಅರ್ಜಿ ಸಲ್ಲಿಸಿ















