ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಫುಟ್ಬಾತ್ ಮೇಲೆ ಮಲಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಯಲಗುಡಿಗೆ ಗ್ರಾಮದ ಸವಿತಾ (60) ಬರ್ಬರವಾಗಿ ಹತ್ಯೆ ಆಗಿರುವ ಮಹಿಳೆ. ಸವಿತಾಳೊಂದಿಗೆ ಭಿಕ್ಷಾಟನೆ ಮಾಡುತ್ತಿದ್ದ ಪೂರ್ಣೇಶ್ ಹತ್ಯೆ ಮಾಡಿರುವ ವ್ಯಕ್ತಿ.

ಇದನ್ನೂ ಓದಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್

ಚಿಕ್ಕಮಗಳೂರು ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಸವಿತಾ, ರಾತ್ರಿ ಫುಟ್ಬಾತ್ ಮೇಲೆ ಮಲಗಿದ್ದಾಗ ಕುಡಿದ ಮತ್ತಿನಲ್ಲಿ ಸವಿತಾಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದು, ನಗರ ಠಾಣೆಯ ಪೊಲೀಸರು ಪೂರ್ಣೇಶ್ ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; APL ಹಾಗೂ BPL ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ
ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೂಡಿಗೆರೆ: ಹೃದಯಾಘಾತದಿಂದ ಯುವಕ ಸಾವು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಜಿಲ್ಲೆಯ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಸಮೀಪದ ಕಾರ್ ಬೈಲ್ ಗ್ರಾಮದ ಚಂದ್ರೇಗೌಡ ಎಂಬುವವರ ದ್ವಿತೀಯ ಪುತ್ರ ಕೆ.ಸಿ.ನಿಶಾಂತ್ ಹೃದಯಾಘಾತದಿಂದ ಮೃತಪಟ್ಟ ಯುವಕ.
ಗುರುವಾರ ಸಂಜೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಹೃದಯಾಘಾತದಿಂದ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ನಿಶಾಂತ್ ಅವರ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ತರಲಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಕಾರ್ ಬೈಲ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.












