ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಬಸರೀಕಟ್ಟೆ ಬಸ್ಸ್ಟ್ಯಾಂಡ್ ಆವರಣದಲ್ಲಿ ಜನವರಿ 25, 2026ರ ಭಾನುವಾರ (ನಾಳೆ) ಸಂಜೆ 4 ಗಂಟೆಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೇಂದ್ರ ಸರ್ಕಾರದ ದಿಶಾ ಸಮಿತಿ ಸದಸ್ಯರಾದ ಮಣಿಕಂಠನ್ ಕಂದಸ್ವಾಮಿ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಶಕಟಪುರದ ಶ್ರೀ ಜಗದ್ಗುರು ಬದರಿ ಶಂಕರಾಚಾರ್ಯ ತೋಟಕಾಚಾರ್ಯ ಶ್ರೀ ವಿದ್ಯಾಭಿನವ ಶ್ರೀ ಶ್ರೀ ಕೃಷ್ಣಾನಂದತೀರ್ಥ ಮಹಾಸ್ವಾಮಿಗಳು ದಿವ್ಯ ಉಪಸ್ಥಿತಿ ವಹಿಸಿ ಆಶೀರ್ವಚನ ನೀಡಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಬಸರೀಕಟ್ಟೆ ಸ್ವಾಗತ ದ್ವಾರದಿಂದ ಭವ್ಯ ಶೋಭಾಯಾತ್ರೆ ಆರಂಭಗೊಂಡು ಬಸ್ಸ್ಟ್ಯಾಂಡ್ನಲ್ಲಿರುವ ವೇದಿಕೆವರೆಗೆ ಸಾಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಸಿ.ಎಸ್. ಸದಾಶಿವ ಭಟ್ ವಹಿಸಲಿದ್ದಾರೆ. ವಕ್ತಾರರಾಗಿ ಸಾಮಾಜಿಕ ಕಾರ್ಯಕರ್ತರು ರಾಜ್ ಮೋಹನ್ ಭಾಗವಹಿಸಲಿದ್ದಾರೆ. ಜೊತೆಗೆ ಕ್ಷೇತ್ರ ಯೋಜನಾಧಿಕಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರೇಶ್ ಅವರು ಉಪಸ್ಥಿತರಿರಲಿದ್ದಾರೆ.
ಸಮಾಜದಲ್ಲಿ ಸುಖ-ಶಾಂತಿ, ಐಕ್ಯತೆ ಹಾಗೂ ರಾಷ್ಟ್ರಹಿತದ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೈಜೋಡಿಸಬೇಕೆಂದು ವಿನಂತಿಸಿದ್ದಾರೆ.












