ಚಿಕ್ಕಮಗಳೂರು: ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಭೆ: ಡಿ. 18ಕ್ಕೆ ಬೆಳಗಾವಿ ಚಲೋ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸಂಸ್ಥೆಗಳ ವಿವಿದ್ದೋದ್ದೇಶ ಸಹಕಾರ ಸಂಘವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ವಿಸ್ತರಿಸುವ ಬೇಡಿಕೆಗಳ ಕುರಿತು ಪ್ರತಿಭಟನೆ ಮಾಡುತ್ತಿರುವ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಹನುಮೇಗೌಡ ತಿಳಿಸಿದರು.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಭೆ ನಡೆಸಿ ಸಂಘದ ಸಾಧನೆಯ ಬಗ್ಗೆ ಹೊರಗುತ್ತಿಗೆ ನೌಕರರಿಗೆ ತಿಳಿಸಿದ ಅವರು, ಡಿ. 18ರಂದು ಬೆಳಗಾವಿಯಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಂಡಿದ್ದು, ರಾಜ್ಯದಿಂದ ಸುಮಾರು 5000ಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರು ಭಾಗವಹಿಸಲಿದ್ದಾರೆ.

ಸರ್ಕಾರದಿಂದ ನ್ಯಾಯಯುತವಾಗಿ ಬಿಸಿಎಂ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪಂಗಡಗಳ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15 -20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಾ ಬಂದಿದ್ದು, ಮಹಿಳೆಯರು ದಲಿತರು ಹೆಚ್ಚಿನದಾಗಿ ಈ ಕೆಲಸ ಮಾಡುತ್ತಾ ಬಂದಿದ್ದು, ಅವರನ್ನು ಕಡೆಗಣಿಸುತ್ತಿರುವುದನ್ನು ಖಂಡಿಸಿದರು.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ನೇರವಾಗಿ ಇಲಾಖೆಯಿಂದ ವೇತನ ಕೊಡುವುದು, ಹತ್ತು ವರ್ಷ ಸೇವೆ ಸಲ್ಲಿಸಿರುವವರನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರುವುದು, ಕನಿಷ್ಠ ವೇತನ ಮಾಸಿಕ 31,000 ನೀಡುವುದು, ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸಂಸ್ಥೆಗಳ ವಿವಿದ್ದೋದ್ದೇ ಸಹಕಾರ ಸಂಘವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ವಿಸ್ತರಿಸುವುದು, ನಿವೃತ್ತಿ ನಂತರ 10 ಲಕ್ಷ ಪರಿಹಾರ ಕೊಡುವುದು, ಏಳು ಜನ ಇರುವ ವಸತಿ ಶಾಲೆಗಳಲ್ಲಿ ಹೆಚ್ಚುವರಿ ನಾಲಕ್ಕು ಜನರನ್ನು ನೇಮಕ ಮಾಡುವಂತೆ, ಹೀಗೆ ಹಲವಾರು ಬೇಡಿಕೆಗಳನ್ನು ಇಟ್ಟುಕೊಂಡು ಸಂಘ ಪ್ರತಿಭಟನೆ ಮಾಡುತ್ತಿದ್ದು, ಎಲ್ಲಾ ಹೊರಗುತ್ತಿಗೆ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.

ಸಭೆಯ ಬಳಿಕ ಜಿಲ್ಲಾ ಪಂಚಾಯಿತಿ ಸಿ ಇ ಓ ಕೀರ್ತನಾ, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಾದ ಮಾಲತಿ, ಪರಿಶಿಷ್ಟ ಪಂಗಡದ ಜಿಲ್ಲಾ ಉಪ ನಿರ್ದೇಶಕರಾದ ಭಗೀರಥಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.


ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!


ಈ ಸಂದರ್ಭದಲ್ಲಿ ಚಿಕ್ಕಮಗಳೂರು, ಕಡೂರು, ತರೀಕೆರೆ, ಎನ್ಆರ್ ಪುರ, ಶೃಂಗೇರಿ, ಕೊಪ್ಪ ಇತರ ತಾಲೂಕಿನ ಹೊರಗುತ್ತಿಗೆ ನೌಕರರು ಹಾಜರಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.