
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಗೋಣಿ ಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬರಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಕರಡಿ ದಾಳಿಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: £19,800 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ

ಗ್ರಾಮದ ನಿವಾಸಿ ವಿನಯ್ ಗೌಡ (40) ಹಾಗೂ ಅವರ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಗಿಡ್ಡಯ್ಯ ಇಬ್ಬರ ಮೇಲೆ ಎರಡು ಕರಡಿಗಳು ದಾಳಿ ನಡೆಸಿವೆ. ಈ ದಾಳಿಯಿಂದಾಗಿ ಇಬ್ಬರಿಗೂ ತಲೆ, ಬೆನ್ನು ಮತ್ತು ಕೈಕಾಲುಗಳಲ್ಲಿ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಕೂಡಲೇ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ನಡೆದ ವೇಳೆಯಲ್ಲಿ ತೋಟದಲ್ಲಿ ಮಂಜು ಕವಿದ ವಾತಾವರಣ ಇದಿದ್ದು, ಇದರಿಂದ ಕರಡಿಗಳ ಅಸ್ತಿತ್ವವನ್ನು ಗಮನಿಸುವಂತಾಗದೆ ಈ ದಾಳಿ ಆಗಿದೆ.
ಇದನ್ನೂ ಓದಿ: £2,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
ಘಟನೆಯ ಸುದ್ದಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಘಟನೆಯಿಂದಾಗಿ ಪ್ರದೇಶದ ಜನರಲ್ಲಿ ಭಯ ಭೀತಿ ಉಂಟಾಗಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)













