ಕಡೂರು: ಕ್ಯಾಬ್ ಚಾಲಕನನ್ನು ಬರ್ಬರವಾಗಿ ಕತ್ತು ಸೀಳಿ ಹತ್ಯೆ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕ್ಯಾಬ್ ಚಾಲಕನನ್ನು ಬರ್ಬರವಾಗಿ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹುಲಿಗೊಂದಿ ಹೊಸೂರು ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ್ (21) ಮೃತ ಕ್ಯಾಬ್ ಚಾಲಕ.

 

ಇದನ್ನೂ ಓದಿ; ರೈತರೇ ಗಮನಿಸಿ; ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತು

ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಕೆಲಸ ಮಾಡುತ್ತಿದ್ದ ದರ್ಶನ್, ಹಾಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ. ಇತ್ತೀಚೆಗೆ ಬೇಲ್ ಪಡೆದು ಇಬ್ಬರು ಸ್ನೇಹಿತರ ಜೊತೆ ಕಡೂರಿನ ಮಾಡಾಳು ಗ್ರಾಮದ ತಾತನ ಮನೆಗೆ ಬಂದಿದ್ದ. ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ ಮೃತ ದರ್ಶನ್ ಸ್ನೇಹಿತರು, ಗುರುವಾರ ರಾತ್ರಿ ಪುನಃ ಬಂದಿದ್ದಾರೆ. ತಾತನಿಗೆ ಫ್ರೆಂಡ್ಸ್ ಬಂದಿದ್ದಾರೆ, ಹೊಲದ ಶೆಡ್ ನಲ್ಲಿ ಮಲಗುತ್ತೇನೆ ಎಂದು ಹೇಳಿ ಹೋಗಿದ್ದಾನೆ. ದರ್ಶನ್ ಕಾರಿನಲ್ಲಿ ಹೋಗಿದ್ದನ್ನ ದರ್ಶನ್ ತಾತ ಕೂಡ ನೋಡಿದ್ದರು. ರಾತ್ರಿ ಹೊಲಕ್ಕೆ ಹೋಗಿ ನೋಡಿದಾಗ ಶೆಡ್ ನಲ್ಲಿ ದರ್ಶನ್ ಇರಲಿಲ್ಲ. ಸ್ನೇಹಿತರ ಜೊತೆ ಎಲ್ಲೋ ಹೋಗಿರಬಹುದು ಎಂದು ತಾತ ಮನೆಗೆ ಬಂದಿದ್ದರು. ಬೆಳಗ್ಗೆ ಮಾಡಾಳು ಗ್ರಾಮದ ತುಸು ದೂರದಲ್ಲಿ ದರ್ಶನ್ ಮೃತದೇಹ ಪತ್ತೆಯಾಗಿದೆ. ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಯಾವ ವಿಚಾರಕ್ಕೆ, ಯಾರು ಕೊಲೆಗೈದಿದ್ದಾರೆ ಎನ್ನುವುದು ನಿಗೂಢವಾಗಿದೆ.

ಇದನ್ನೂ ಓದಿ; ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ; ಹೆಸರು ನೋಂದಾಯಿಸಿಕೊಳ್ಳಲು ಇಲ್ಲಿದೆ ವಿವರ

ಇನ್ನು ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 

ಚಿಕ್ಕಮಗಳೂರು: ಕಾಡಾನೆ ಬಳಿಕ ಕಾಡುಕೋಣಗಳ ಕಾಟ | ಜೀವ ಭಯದಲ್ಲಿ ಗ್ರಾಮಸ್ಥರು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲ ತಿಂಗಳುಗಳಿಂದ ಜಿಲ್ಲೆಯಾದ್ಯಂತ ಕಾಡಾನೆ ಹಾವಳಿ ಜೋರಾಗಿದ್ದು ಇದರಿಂದ ತೋಟದ ಕಾರ್ಮಿಕರು ಕೆಲಸಕ್ಕೆ ಹೋಗಲು ಭಯಪಡುತ್ತಿರುವ ಬೆನ್ನಲ್ಲೇ ಇದೀಗ ಕಾಡುಕೋಣಗಳ ಹಿಂಡೊಂದು ಚಿಕ್ಕಮಗಳೂರು ತಾಲೂಕಿನ ಬೆಟ್ಟದಮರಡಿ ಗ್ರಾಮದಲ್ಲಿ ಕಂಡುಬಂದಿದೆ.

 

ಇದನ್ನೂ ಓದಿ; ಕೇಂದ್ರದ 300 ಯೂನಿಟ್ ಉಚಿತ ವಿದ್ಯುತ್ ಪಡೆಯುವುದು ಹೇಗೆ?; ಹೇಗೆ ಸಿಗಲಿದೆ ಸಬ್ಸಿಡಿ ಲಾಭ; ಅರ್ಜಿ ಸಲ್ಲಿಕೆ ಹೇಗೆ?

ಸುಮಾರು ಹದಿನೈದಕ್ಕೂ ಹೆಚ್ಚು ಕಾಡುಕೋಣಗಳು ಕಂಡುಬಂದಿದ್ದು ಗ್ರಾಮಸ್ಥರು ಜೀವ ಭಯದಲ್ಲಿ ಕೆಲಸಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಕಾಡಾನೆ ದಾಳಿಯಿಂದ ಕಂಗೆಟ್ಟ ಜನರು ಮನೆಯಿಂದ ಹೊರಬರಲು ಹೆದರುವ ಸ್ಥಿತಿ ನಿರ್ಮಾಣವಾಗಿತ್ತು ಇದರ ಜೊತೆಗೆ ಕಾಡುಕೋಣಗಳು ನಾಡಿನತ್ತ ಹೆಜ್ಜೆ ಹಾಕಲಾರಂಭಿಸಿದೆ.

ತೋಟದ ಕೆಲಸ ಹಾಗೂ ಇತರ ಕೆಲಸಗಳಿಗೂ ಹೋಗಲು ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಗ್ರಾಮಸ್ಥರು ಸೇರಿ ಕಾಡುಕೋಣಗಳನ್ನು ಕಡಿಗಟ್ಟುವ ಪ್ರಯತ್ನವನ್ನೂ ಮಾಡಿದ್ದಾರೆ. ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ ನೀಡಿದರು ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ. ಕಾಡು ಪ್ರಾಣಿಗಳ ಹಾವಳಿಗೆ ಬೇಸತ್ತು ಹೋಗುತ್ತಿರುವ ಮಲೆನಾಡು ಭಾಗದ ಜನರು ಕಾಡು ಕೋಣಗಳ ಹಿಂಡನ್ನು ಕಂಡು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಮೂಡಿಗೆರೆ: ಮನೆ ಮಾಲೀಕನಿಗೆ ಖಾರದಪುಡಿ ಎರಚಿ ಲಕ್ಷಾಂತರ ಮೌಲ್ಯದ ನಗದು ದರೋಡೆ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ನಾಲ್ವರು ಅಪರಿಚಿತ ಯುವಕರ ತಂಡವೊಂದು ಮನೆ ಮಾಲಿಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ಮನೆಯಲ್ಲಿದ್ದ ಸುಮಾರು 5 ಲಕ್ಷ ನಗದು, 30 ಗ್ರಾಂ ಮಾಂಗಲ್ಯ ಸರವನ್ನ ಹೊತ್ತೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಗುರುವಾರ ರಾತ್ರಿ 8 ಗಂಟೆಗೆ ನಡೆದಿದೆ.

ಹೆಬ್ಬಾರಟ್ಟಿ ಅನಂತ ಹೆಬ್ಬಾರ್ ಎಂಬುವರ ಮನೆಯಲ್ಲಿ ದರೋಡೆ ನಡೆದಿದ್ದು, ನಾಲ್ವರು ಅಪರಿಚಿತ ಯುವಕರ ತಂಡ ಮನೆಯ ಮೇಲೆ ದಾಳಿ ನಡೆಸಿ ಮನೆ ಮಾಲೀಕನ ಕುತ್ತಿಗೆಗೆ ಹರಿತವಾದ ಲಾಂಗ್ ಇಟ್ಟು ಬೆದರಿಸಿ ಮನೆಯಲ್ಲಿದ್ದ ಸುಮಾರು ಐದು ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಕಾರ್ಮಿಕ ಮಾಣಿ ಭಟ್ಟ ಎಂಬವರ ಕೈಗೆ ಹರಿತವಾದ ಆಯುಧದಿಂದ ಕೈ ಕಡಿದಿದ್ದಾರೆ. ಈ ವೇಳೆ ಕಾರ್ಮಿಕ ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಜನ ಸೇರುತ್ತಿದ್ದಂತೆ ಮೂವರು ಕಾರಿನಲ್ಲಿ ಪರಾರಿಯಾಗಿದ್ದಾರೆ. ಓರ್ವ ಅರಮನೆ ತಲಗೂರು ಎಂಬ ಗ್ರಾಮದ ಅರಣ್ಯದಲ್ಲಿ ಅವಿತು ಕೂತಿದ್ದು, ಸ್ಥಳೀಯರು ಸೇರಿ ಅರಣ್ಯ ಪ್ರದೇಶದಲ್ಲಿ ಹುಡುಕಾಡಿದಾಗ ಓರ್ವ ಪತ್ತೆಯಾಗಿದ್ದು, ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.