ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನ ಟಿಟಿ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಟಿಟಿ ಡ್ರೈವರ್.
ಇದನ್ನೂ ಓದಿ; ಮಹಿಳೆಯರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಈ ದಿನ ಜಮಾ

ಚಿಕ್ಕಮಗಳೂರಿಗೆ ಪ್ರವಾಸಿಗರನ್ನ ಹೋಂ ಸ್ಟೇ ಬಳಿ ಬಿಟ್ಟ ಬಳಿಕ ಅವಿನಾಶ್ ಗೆ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ್ ಮೂರು ವರ್ಷದ ಹಿಂದೆ ಮದುವೆಯಾಗಿದ್ದು, 2 ವರ್ಷದ ಮಗು ಇದೆ.
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












