ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಬಿಜಿಎಸ್ ಸೈನ್ಸ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿಘ್ನೇಶ್ ಬಿ. ಸಿ. ಗೌಡ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ

ಪ್ರಥಮ ಪಿಯುಸಿ ಸೈನ್ಸ್ ವಿಭಾಗದಲ್ಲಿ ಓದುತ್ತಿರುವ ಮಂಜುನಾಥ್ ಟೇಕ್ವಾಂಡೋದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸಂಗಮೇಶ್ ಎಸ್ ಬಾಗೂರ್ ಹಾಗೂ ಪ್ರಭುದ್ ನಾಯ್ಕ್ ರಾಜ್ಯ ಮಟ್ಟದ ಶೆಟಲ್ ಬ್ಯಾಟ್ಮಿಟನ್ ಗೆ ಆಯ್ಕೆಯಾಗಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಧನುಶ್ ಎಸ್. ಪಿ, ತನುಶ್ ಬಿ. ಕೆ, ಸಮನ್ವಿ ಬಿ. ಎ ಇವರು ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜೊತೆಗೆ ಬಿಜಿಎಸ್ ಕಾಲೇಜಿನ ಪಿಯು ಕಾಮರ್ಸ್ ಬಾಲಕಿಯರ ವಿಭಾಗದಲ್ಲಿ ರಕ್ಷಿತ, ಪ್ರಕೃತಿ ಹಾಗೂ ಬಾಲಕರ ವಿಭಾಗದಲ್ಲಿ ಸಚಿನ್ ಇವರುಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.









ಈ ಎಲ್ಲಾ ವಿದ್ಯಾರ್ಥಿಗಳು ಬಿಜಿಎಸ್ ಶೃಂಗೇರಿ ಸೈನ್ಸ್ ಮತ್ತು ಕಾಮರ್ಸ್ ಪಿಯು ಕಾಲೇಜಿನ ಕೀರ್ತಿ ಪತಾಕೆಯನ್ನು ರಾಜ್ಯ-ರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದು, ಇವರೆಲ್ಲರಿಗೂ ಪರಮ ಪೂಜ್ಯ ಶ್ರೀ ಗುಣನಾಥ ಸ್ವಾಮಿಜಿಯವರು ಆಶೀರ್ವಾದಿಸಿ, ಶುಭ ಹಾರೈಸಿದ್ದಾರೆ. ಹಾಗೆಯೇ ಕಾಲೇಜಿನ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಶಾಲಾ- ಕಾಲೇಜಿನ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭಕೋರಿದ್ದಾರೆ.
ಇದನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!












