ಕೊಪ್ಪದ ಕಾಚ್ಗಲ್ ರಸ್ತೆಯಲ್ಲಿರುವ ಎ. ಎಲ್. ಎನ್. ರಾವ್ ಆಯುರ್ವೇದ ಮಹಾವಿದ್ಯಾಲಯದ ನವೀನ ಸ್ನಾತಕೋತ್ತರ (ಪಿಜಿ) ಕಟ್ಟಡ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಕಾಲೇಜಿನ ಆಡಿಟೋರಿಯಂ ಪಕ್ಕದ ಜಾಗದಲ್ಲಿ ಸುಸಜ್ಜಿತ ಸ್ನಾತಕೋತ್ತರ ಕೇಂದ್ರದ ಎರಡು ಅಂತಸ್ತಿನ ವಿಶಾಲ ಕಟ್ಟಡ ನಿರ್ಮಾಣಗೊಳ್ಳಲಿದ್ದು, ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಮತ್ತು ಸಂಶೋಧನಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದೆ.
ಕಾಲೇಜು ಟ್ರಸ್ಟಿ ನಮಿತಾ ರಾವ್ ಅವರ ನೇತೃತ್ವದಲ್ಲಿ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಎನ್.ಎಂ. ಹರ್ಷ, ಸ್ನಾತಕೋತ್ತರ ವಿಭಾಗದ ಉಪ ಪ್ರಾಂಶುಪಾಲರಾದ ಡಾ. ಡಿ.ಕೆ. ಮಿಶ್ರ, ಯು.ಜಿ. ವಿಭಾಗದ ಉಪ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಭಟ್, ಪ್ರಾಧ್ಯಾಪಕರಾದ ಡಾ. ಕೃಷ್ಣ ಕಿಶೋರ್, ಡಾ. ಜಗದೀಶ್ ಮಯ್ಯ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













