ಭೂಮಿಕ ಟಿವಿಯ ವಾರ್ಷಿಕೋತ್ಸವದ ಅಂಗವಾಗಿ ಭೂಮಿಕಾ ಸಪ್ತಾಹ ಕಾರ್ಯಕ್ರಮ ಆಯೋಜನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ಭೂಮಿಕ ಟಿವಿಯ ವಾರ್ಷಿಕೋತ್ಸವದ ಅಂಗವಾಗಿ ಭೂಮಿಕಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಏನದು ಗೊತ್ತಾ? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇದೇ ಸೋಮವಾರ (06.01.2025) ಅಂದರೆ ಇಂದಿನಿಂದ ಭೂಮಿಕ ಟಿವಿಯ 3 ನೇ ವಾರ್ಷಿಕೋತ್ಸವ ಹಾಗೂ ಸ್ವಾಮಿ ವಿವೇಕಾನಂದ, ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತೋತ್ಸವ ಅಂಗವಾಗಿ ಪ್ರತಿಷ್ಠಿತ ಆಸ್ಪತೆಯ ನುರಿತ ವೈದ್ಯರು ಹಾಗೂ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕನ್ನಡಕ ಹಾಗೂ ಔಷಧಿ ವಿತರಣೆ ಕಾರ್ಯಕ್ರಮ, ರಕ್ತದಾನ, ದೇಹ ದಾನ, ನೇತ್ರದಾನ ನೊಂದಣಿ ಶಿಬಿರ, ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಗಿಡ ನೆಡುವ ಕಾರ್ಯಕ್ರಮ, ಹಲವು ಸಾಂಸ್ಕೃತಿಕ ಹಾಗೂ ಕ್ರೀಡೆಗಳನ್ನು ಇಂದಿನಿಂದ (6.01.2025) 11.01.2025 ಶನಿವಾರದ ವರೆಗೆ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಮರಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಕ್ಕು ಇರುವುದಿಲ್ಲ: ಹೈಕೋರ್ಟ್; ಏನಿದು ತೀರ್ಪು?


ಕಾರ್ಯಕ್ರಮದ ವಿವರ ಹೀಗಿದೆ:
* 06.01.2025 ರ ಸೋಮವಾರ ಅಂಬೇಡ್ಕರ್ ಭವನದಲ್ಲಿ ಪ್ರತಿಷ್ಠಿತ ಆಸ್ಪತ್ರೆಯ ನುರಿತ ವೈದ್ಯರು ಹಾಗೂ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ, ಉಚಿತ ಕನ್ನಡಕ ಹಾಗೂ ಔಷಧಿ ವಿತರಣೆ, ರಕ್ತದಾನ, ದೇಹ ದಾನ, ನೇತ್ರದಾನ ನೊಂದಣಿ ಶಿಬಿರ.

* 07.01.2025ರ ಮಂಗಳವಾರದಂದು ಅಂಬೇಡ್ಕರ್ ಭವನದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಮಹಿಳೆಯರಿಗಾಗಿ ರಂಗೋಲಿ ಮತ್ತು ಬೆಂಕಿ ಇಲ್ಲದ ಅಡುಗೆ ಸ್ಪರ್ಧೆ ಆಯೋಜಿಸಲಾಗಿದೆ.

* 08.01.2025ರ ಬುಧವಾರ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಹಾಗೂ ಹಿರಿಯ ನಾಗರಿಕರಿಗೆ, ವಿದ್ಯಾರ್ಥಿಗಳಿಗೆ, ಪತ್ರಕರ್ತರಿಗೆ ಮೋಜಿನ ಸ್ಪರ್ಧೆಗಳು ಏರ್ಪಡಿಸಲಾಗಿದೆ.

* 09.01.2025ರ ಗುರುವಾರ ಪತ್ರಕರ್ತರ ಭವನದಲ್ಲಿ ಕಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಕಿರು ನಾಟಕ ಸ್ಪರ್ಧೆ ಆಯೋಜಿಸಲಾಗಿದೆ.

* 10.01.2025ರ ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಸಾರ್ವಜನಿಕರಿಗೆ ಕರೋಕೆ ಗಾಯನ ಹಾಗೂ ಸಾರ್ವಜನಿಕರಿಗೆ ಕಿರು ಚಿತ್ರ ಸ್ಪರ್ಧೆ ನಡೆಯಲಿದೆ.

* 11.01.2025ರ ಶನಿವಾರದಂದು ಕುವೆಂಪು ಕಲಾಮಂದಿರದಲ್ಲಿ ಶಾಲೆಯ ಮಕ್ಕಳಿಗಾಗಿ ಶಾಸ್ತ್ರೀಯ ಹಾಗೂ ಪಶ್ಚಿಮಾತ್ಯ ನೃತ್ಯ ಸ್ಪರ್ಧೆಗಳು, ನಂಜೆ 5:30ಕ್ಕೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರ್‌ ಗೆ ಸಂಪರ್ಕಿಸಬಹುದಾಗಿದೆ: 9480001009, 08262 200 400


ಇದನ್ನೂ ಓದಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 10,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.