ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಹೊರವಲಯದ ಎಐಟಿ ವೃತ್ತದಲ್ಲಿ ನಡೆದಿದೆ. ತಾಲೂಕಿನ ಹಲಸುಬಾಳು ಗ್ರಾಮದ 22 ವರ್ಷದ ದೀಪಕ್ ಮೃತಪಟ್ಟ ದುರ್ದೈವಿ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಅತಿ ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೀಪಕ್ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರು ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












