
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ಸಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ 18 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರಿನಲ್ಲಿ ಅ.27ರಂದು ನಡೆದಿದೆ.
ಮೃತ ಯುವಕನನ್ನು ತರುಣ್ ಎಂದು ಗುರುತಿಸಲಾಗಿದೆ. ಕಡೂರಿನ ದೇವರಾಜ ಅರಸು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ಖಾಸಗಿ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬೈಕ್ನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












