
ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ವೇಗವಾಗಿ ಬಂದು ರಸ್ತೆ ಬದಿಯ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದ ಹಳ್ಳಿ ಗೇಟ್ ಬಳಿ ನಡೆದಿದೆ. ಬಗ್ಗವಳ್ಳಿ ಗ್ರಾಮದ ಸಂಜು (26), ಪ್ರದೀಪ್ (30) ಸ್ಥಳದಲ್ಲೇ ಸಾವನ್ನಪ್ಪಿರುವ ಯುವಕರು.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಅಂತರಘಟ್ಟಮ್ಮ ಜಾತ್ರೆಗೆ ತೆರಳುವಾಗ ಈ ಘಟನೆ ನಡೆದಿದ್ದು, ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡಿದ ಪರಿಣಾಮ ಮರಕ್ಕೆ ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ ಬೈಕ್ ಕೂಡ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: ಅನಧಿಕೃತ ಪಂಪ್ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಕಾನೂನು ಕ್ರಮ ಫಿಕ್ಸ್!, ಯಾಕೆ ಗೊತ್ತಾ?
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.













