ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಎಸ್ಕೆ ಬಾರ್ಡರ್ ಬಳಿ ನಡೆದಿದೆ. ಮೃತರನ್ನು ನವೀನ್ ಬಜಗೋಳಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ನವೀನ್ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದು, ಹಾವು ಹಿಡಿಯುವ ಕೆಲಸವನ್ನು ಮಾಡುತ್ತಿದ್ದರು. ಇಂದು ಬೆಳಿಗ್ಗೆ ಹಾವು ಹಿಡಿದು ಕಾಡಿಗೆ ಬಿಡಲೆಂದು ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ. ಸ್ಕೂಟಿಯಲ್ಲಿದ್ದ ಮತ್ತೊಬ್ಬ ಸವಾರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!












