ಭದ್ರಾವತಿ: (ನ್ಯೂಸ್ ಮಲ್ನಾಡ್ ವರದಿ) ನಗರದ ಹುತ್ತ ಕಾಲೋನಿಯ ಮೀನು ಮಾರುಕಟ್ಟೆ ಬಳಿ ಕಾಮಗಾರಿ ನಡೆಯುತ್ತಿದ್ದ ಸೇತುವೆಯಿಂದ ಬೈಕ್ ಸಮೇತ ಕಾಲುವೆಗೆ ಬಿದ್ದಿದ್ದ ವ್ಯಕ್ತಿಯನ್ನು ನ್ಯೂ ಟೌನ್ ಪೊಲೀಸ್ ಠಾಣೆಯ ತುರ್ತು ಸ್ಪಂದನ ವಾಹನದ ಸಿಬ್ಬಂದಿ ರಕ್ಷಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ಸೋಮವಾರ ರಾತ್ರಿ ವೇಗದಿಂದ ಬೈಕ್ ಚಾಲನೆ ಮಾಡಿಕೊಂಡು ಬಂದ ವ್ಯಕ್ತಿ, ವಾಹನ ಸಮೇತ ಸೇತುವೆಯಿಂದ ಕಾಲುವೆಗೆ ಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ತುರ್ತು ಸ್ಪಂದನ ವಾಹನದ ಪೊಲೀಸ್ ಸಿಬ್ಬಂದಿ ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಸಹಕಾರದಿಂದ ರಕ್ಷಿಸಿ, ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಭಾಗವಸಿದ್ದ ಪೊಲೀಸ್ ಸಿಬ್ಬಂದಿಯನ್ನು ಶಿವಮೊಗ್ಗ SP ಬಿ. ನಿಖಿಲ್ ಅಭಿನಂದಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ














