ಕಡೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ದೇವಸ್ಥಾನದ ಮಹಾನವಮಿ ಬಯಲಿನಲ್ಲಿ ಇಂದು ನಸುಕಿನ ಜಾವ ಕಾರ್ಣಿಕ ನುಡಿಯಲಾಯಿತು. ಮೈಲಾರಲಿಂಗ ಸ್ವಾಮಿಯ ಕಾರ್ಣಿಕ ಕೇಳಲು ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸಿದ್ದರು.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ

ಬೀರೂರು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ದೇವಸ್ಥಾನದ ಮಹಾನವಮಿ ಬಯಲಿನಲ್ಲಿ ಇಂದು ನಸುಕಿನ ಜಾವ 4:45ರ ಸುಮಾರಿಗೆ ಕಾರ್ಣಿಕ ನುಡಿಯಲಾಯಿತು. “ಇಟ್ಟ ರಾಮನ ಬಾಣ ಹುಸಿಯಿಲ್ಲ, ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವ ರಾಶಿಗೆ ಸಂಪಾಯಿತಲೇ ಪರಾಕ್” ಎಂದು ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕವನ್ನು ಗೊರವಯ್ಯ ನುಡಿದರು.
ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಸಿಎಂ ನಿಂದ ಗುಡ್ ನ್ಯೂಸ್; ಮುಖ್ಯಮಂತ್ರಿ ಹೇಳಿದ್ದೇನು?
ಅಂದರೆ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಕಲ ಜೀವರಾಶಿಗಳು ಸಂಪಾಗಿರುತ್ತದೆ. ಅದೇ ರೀತಿ ರಾಜ್ಯದಲ್ಲಿ ಮುಂದೆ ನಡೆಯಬಹುದಾದ ಅನಾಹುತಗಳ ಬಗ್ಗೆ ಜ್ಞಾನಿಗಳು ತಿಳಿಸುತ್ತಾರೆ. ಹೀಗಾಗಿ, ಜನರು ಜ್ಞಾನಿಗಳು ನುಡಿಯುವ ಭವಿಷ್ಯವನ್ನು ಗಂಭೀರವಾಗಿ ಪರಿಗಣಿಸಿ.
ಇದನ್ನೂ ಓದಿ; ಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ; ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?
ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಕೆಲವರು ಜೈಲು ಪಾಲಾಗಿದ್ದಾರೆ. ಈ ಪ್ರಕರಣಗಳಲ್ಲಿ ಸತ್ಯಕ್ಕೆ ಜಯವಾಗುವುದಿಲ್ಲ. ಅನ್ಯಾಯದ ದಾರಿಯಲ್ಲಿದ್ದವರಿಗೆ ಜಯವಾಗುತ್ತದೆ. ಇದೆಲ್ಲದರ ನಡುವೆಯೇ ರಾಜ್ಯದ ಜನತೆಗೆ ಒಳ್ಳೆಯದಾಗಲಿದೆ ಎಂದಿದ್ದಾರೆ.












