ಮೂಡಿಗೆರೆ: ಕೃಷಿಕನ ಮೇಲೆ ಕಾಡುಕೋಣ ದಾಳಿ: ಗಂಭೀರ ಗಾಯ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ದುರ್ಗದಹಳ್ಳಿ ಸಮೀಪ ಮಂಗಳವಾರ ಸಂಜೆ ನಡೆದಿದೆ. ಹಲಗಡ್ಕ ನಿವಾಸಿ ರಾಜೇಶ್ ಕಾಡುಕೋಣ ದಾಳಿಗೊಳಗಾದ ರೈತ.

 

ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಇದ್ರೆ ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ!; ಹೇಗೆ.. ಏನು ನಿಯಮ..?

ಜಮೀನಿನಲ್ಲಿ ಇದ್ದ ವೇಳೆ ಕಾಡುಕೋಣ ದಾಳಿ ನಡೆಸಿದ್ದು, ಕೊಂಬಿನ ಮೇಲೆ ಸುಮಾರು ದೂರ ಎಳೆದೊಯ್ದಿತ್ತು ಎನ್ನಲಾಗಿದೆ. ರಾಜೇಶ್ ಅವರ ತಲೆ, ಹೊಟ್ಟೆ ಮತ್ತು ಕಾಲಿನ ಭಾಗಕ್ಕೆ ತೀವ್ರವಾಗಿ ಗಾಯಗೊಂಡಿದ್ದು, ಕಳಸ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; pm ಕಿಸಾನ್ ಯೋಜನೆಯ ನೋಂದಣಿ ಹೇಗೆ ಮಾಡೋದು..; ಸಿಂಪಲ್ ಸ್ಟೆಪ್ಸ್ ಇಲ್ಲಿವೆ!

ಈ ಭಾಗದಲ್ಲಿ ಕಾಡುಕೋಣಗಳ ಹಾವಳಿ ಮಿತಿಮೀರಿದ್ದು, ಕಾರ್ಮಿಕರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ; svc ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ಉದ್ಯೋಗ;113 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಡೂರು: ಕಾರು-ಬೈಕ್ ನಡುವೆ ಭೀಕರ ಅಪಘಾತ: ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು

ಕಡೂರು:  (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಅಂಡರ್ ಪಾಸ್ ನಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (44) ಸ್ಥಳದಲ್ಲೇ ಮೃತಪಟ್ಟ ಹೆಡ್ ಕಾನ್ಸ್ ಟೇಬಲ್.

ಕಡೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ್, ಪ್ರಕರಣವೊಂದರ ಸ್ಥಳ ಮಹಜರ್ ಗೆ ಅಂಚೆಚೋಮನಹಳ್ಳಿಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಮಲ್ಲಿಕಾರ್ಜುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.