ಕಾರ್ಯಕರ್ತರ ಶ್ರಮದಿಂದ ಲೋಕಸಭೆ ಸದಸ್ಯನಾಗಿ ಆಯ್ಕೆಯಾಗಿದ್ದು ನಿರ್ಧಿಷ್ಠ ಯೋಜನೆಗಳನ್ನು ರೂಪಿಸಿಕೊಂಡು ಜೆಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಜನರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ಅಭಿನಂದನಾ ಸಮಾರಂಭದಲ್ಲಿ ಹೇಳಿಕೆ ನೀಡಿದರು.
ಇದನ್ನೂ ಓದಿ: ಏರಿಕೆಯ ಹಾದಿಯಲ್ಲಿ ಅಡಿಕೆ ರೇಟ್; ಇಲ್ಲಿದೆ ನೋಡಿ ಇವತ್ತಿನ ರೇಟ್

ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ ಹಿಂದುತ್ವಕ್ಕಾಗಿ ರಾಜಕಾರಣಕ್ಕೆ ಬಂದಿದ್ದೇನೆ, ರಾಜ್ಯದಲ್ಲಿ ಕಾಂಗ್ರೆಸ್ ಬೆಲೆ ಏರಿಸಿ ರಾಜ್ಯವನ್ನು ಅಭಿವೃದ್ಧಿ ಹೀನವನ್ನಾಗಿಸುತ್ತಿದ್ದು, ಕೇವಲ ಗ್ಯಾರೆಂಟಿ ಯೋಜನೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು
ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಅದಕ್ಕಾಗಿ ಕಾರ್ಯಕರ್ತರ ಜೊತೆಗೂಡಿ ಕೆಲಸ ಮಾಡಬೇಕು ಎಂದರು.
ಇದನ್ನೂ ಓದಿ: ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್
ಮಾಜಿ ಸಚಿವ ಡಿ ಎನ್ ಜೀವರಾಜ್ ಮಾತನಾಡಿ ವಿಧಾನಸಭೆ ಚುನಾವಣೆಯಲ್ಲಿ ನೂರು ಮತಗಳ ಅಂತರದಿಂದ ಗೆದ್ದವರು ಬಿಜೆಪಿ ಕಾರ್ಯಕರ್ತರ ಮುಂದೆ ಸಂಭ್ರಮ ಆಚರಿಸುತ್ತಿದ್ದಾರೆ, ಲೋಕಸಭೆಯಲ್ಲಿ 2.50 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿದ ಕಾರ್ಯಕರ್ತರಿಗೆ ಅಭಿನಂದನೆ ಹಾಗೂ ಕೃತಜ್ಞತೆ ತಿಳಿಸುವುದಕ್ಕೆ ಸೀಮಿತವಾಗದೆ, ಸಂಸದರಿಗೆ ವಿಧಾನಸಭಾ ಕ್ಷೇತ್ರದಲ್ಲಿ 25 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಿಕ್ಕಿದ್ದರಲ್ಲಿ ಕಾರ್ಯಕರ್ತರ ಶ್ರಮಿಸಿದ್ದು ಅವರ ಅಪೇಕ್ಷೆಯಂತೆ ರಾಜಬೀದಿಯಲ್ಲಿ ಅದ್ಧೂರಿ ವಿಜಯೋತ್ಸವ ಆಚರಿಸಲಾಗುವುದು ಎಂದರು
ಇದನ್ನೂ ಓದಿ: ಈ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ; ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶೃಂಗೇರಿ, ಕೊಪ್ಪ ಹಾಗೂ ನರಸಿಂಹರಾಜಪುರದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ಹಾಗೂ ಧನಂಜಯ ಸರ್ಜಿ ಅವರನ್ನು ಅಭಿನಂದಿಸಲಾಯಿತು.
ನೀಟ್ ಪರೀಕ್ಷೆಯಲ್ಲಿ ಅಕ್ರಮ : ತನಿಖೆಗೆ ಆಗ್ರಹಿಸಿ ಎನ್ಎಸ್’ಯುಐ ಪ್ರತಿಭಟನೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಅಕ್ರಮ ನಡೆದಿರುವ ಅನುಮಾನ ಇದ್ದು, ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಎನ್‍ಎಸ್‍ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್ ಮುಖಂಡರು ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಹನುಮಂತಪ್ಪ ವೃತ್ತದಿಂದ ಎಂ.ಜಿ. ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣಗಳಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗಿದೆ. ಈ ಬಾರಿಯ ನೀಟ್ ಫಲಿತಾಂಶದಲ್ಲಿ ಒಟ್ಟು 67 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ ಸುಮಾರು 8 ವಿದ್ಯಾರ್ಥಿಗಳು ಮೊದಲ ರ‍್ಯಾಂಕ್ ಪಡೆದಿದ್ದು, 6 ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿದ್ದಾರೆ. ಆದಕಾರಣ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷಾ ಅಕ್ರಮ ಆಗಿರುವ ಸಾಧ್ಯತೆ ಹೆಚ್ಚಿದ್ದು ಕೇಂದ್ರ ಸರ್ಕಾರ ನೀಟ್ ಅಕ್ರಮದ ತನಿಖೆ ನಡೆಸಿ ನ್ಯಾಯ ದೊರಕಿ ಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎನ್‍ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಮಂತ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಎನ್‍ಎಸ್‍ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಜಾಕೀರ್ ಹುಸೇನ್, ರಾಜ್ಯ ಕಾರ್ಯದರ್ಶಿ ಆದಿಲ್, ಜಿಲ್ಲಾ ಉಪಾಧ್ಯಕ್ಷ ದೃವಕುಮಾರ್, ವೆಂಕಟೇಶ್, ಪ್ರೀತಂ ಗೌಡ, ಸುನೀಲ್, ವಿನಯ್ ಭಾಗವಹಿಸಿದ್ದರು.
ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.












