ಚಿಕ್ಕಮಗಳೂರು: ಸಿಟಿ ರವಿ ಆಪ್ತನ ಮೇಲೆ ಮುಸುಕುಧಾರಿಗಳಿಂದ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಅವರ ಆಪ್ತ, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದುರ್ಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಮಧ್ಯರಾತ್ರಿ ಮುಸುಕುಧಾರಿಗಳು ಮನೆಗೆ ನುಗ್ಗಿ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

 

ಇದನ್ನೂ ಓದಿ; ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?

ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ದುರ್ಗೇಶ್ ನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ; ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಅಗ್ಗ; ಮುಂದಿನ ದಿನಗಳಲ್ಲಿ ಮತ್ತೆ ಏರುವ ಸಾಧ್ಯತೆ

ಆಪ್ತನ ಆರೋಗ್ಯ ವಿಚಾರಿಸಿದ ಸಿಟಿ ರವಿ:
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸಿಟಿ ರವಿ ಅವರು ಜಿಲ್ಲಾಸ್ಪತ್ರೆಗೆ ಆಗಮಿಸಿ ದುರ್ಗೇಶ್ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಲಾಗಿದೆ. ರಾಡ್ ನಿಂದ ಹಲ್ಲೆ ಮಾಡಿರುವ ಉದ್ದೇಶ ಕೊಲೆ ಮಾಡುವುದು. ಮಂಕಿ ಕ್ಯಾಪ್ ಗ್ಲೌಸ್ ಹಾಕಿಕೊಂಡು ಬಂದಿದ್ದಾರೆ ಎಂದು ಆರೋಪಿಸಿದರು.

 

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 01.12.2023

ತನಿಖೆಗೆ ಒತ್ತಾಯ:
ದುರ್ಗೆಶ್ ಬಗರ್ ಕುಂ ಸಾಗುವಳಿ ಹಾಗೂ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದ್ದಾರೆ. ಗೋಮಾಳ ಜಮೀನಿನಲ್ಲಿ ಕ್ರಷರ್ ಗೆ ಅನುಮತಿ ನೀಡಿದ್ದಾರೆ. ಆದರೆ ರೈತರಿಗೆ ರಾಗಿ ಬೆಳೆಯಲು ಬಿಡುವುದಿಲ್ಲ. ಇದರ ವಿರುದ್ಧ ದುರ್ಗೇಶ್ ಹೋರಾಟ ಮಾಡಿದ್ದಾರೆ. ದುರುದ್ದೇಶ ಪೂರ್ವಕವಾಗಿ ಹತ್ಯೆ ಮಾಡಲು ಹಲ್ಲೆ ಮಾಡಲಾಗಿದೆ. ಪೊಲೀಸ ಇಲಾಖೆ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

 

ಚಿಕ್ಕಮಗಳೂರು: ಹೆಲ್ಮೆಟ್ ವಿಚಾರಕ್ಕೆ ವಕೀಲನ ಮೇಲೆ ಹಲ್ಲೆ | ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕೋರ್ಟ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಹೆಲ್ಮೆಟ್ ಹಾಕದ ಕಾರಣಕ್ಕೆ ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಮ್ ಎನ್ನುವರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ.

ಇದನ್ನೂ ಓದಿ; FID ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ FID ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಏನಿದು ಘಟನೆ:
ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನ ಮೇಲೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದರು. ಘಟನೆಗೆ ಸಂಬಂಧಿಸಿ ಈಗಾಗಲೇ ಪಿಎಸ್ ಐ ಸೇರಿ ೬ ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಪೊಲೀಸರ ದೌರ್ಜನ್ಯದಿಂದ ವಕೀಲ ಪ್ರೀತಂ ಅವರ ಎದೆ, ಕೈ ಮತ್ತು ಬೆನ್ನಿಗೆ ಸಾಕಷ್ಟು ಗಾಯಗಳಾಗಿದ್ದು, ಇದು ವಕೀಲ ಸಮೂಹವನ್ನು ಇನ್ನಷ್ಟು ಕೆರಳುವಂತೆ ಮಾಡಿದೆ. ರಾತ್ರಿಯಿಡೀ ಠಾಣೆಯ ಎದುರು ಧರಣಿ ನಡೆಸಿ, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ; ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?

ಮುಖ್ಯನ್ಯಾಯಮೂರ್ತಿಯಿಂದ ಅಸಮಾಧಾನ:
ಹೆಲ್ಮೆಟ್ ಹಾಕದ ಕಾರಣಕ್ಕೆ ಅಮಾನುಷ ಹಲ್ಲೆ ಆಘಾತಕಾರಿ ಎಂದು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಕೃಷ್ಣ ಎಸ್. ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ವಕೀಲರಿಗೇ ಹೀಗಾದರೆ ಜನಸಾಮಾನ್ಯರ ಕಥೆ ಏನು? ಹೆಲ್ಮೆಟ್ ಹಾಕದ ಕಾರಣಕ್ಕೆ ಹೀಗೆ ಹಲ್ಲೆ ನಡೆಸಬಹುದೇ? ಎಂದು ಪ್ರಶ್ನಿಸಿದ ಹೈಕೋರ್ಟ್, ಈ ಪ್ರಕರಣದ ಬಗ್ಗೆ ಕೈಗೊಂಡ ಕ್ರಮದ ಮಾಹಿತಿ ನೀಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.