ಶೃಂಗೇರಿ ತಡೆಗೋಡೆ ವಿಚಾರದಲ್ಲಿ ಬಿಜೆಪಿಯ ರಾಜಕಾರಣ ಹಾಸ್ಯಾಸ್ಪದ: ಕಾರ್ತಿಕ್ ಕಾರ್ ಗದ್ದೆ ಆರೋಪ

ಶೃಂಗೇರಿ: (ನ್ಯೂಸ್‌ ಮಲ್ನಾಡ್‌ ವರದಿ) ಶೃಂಗೇರಿ ಕ್ಷೇತ್ರದ ತಡೆಗೋಡೆ ನಿರ್ಮಾಣ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ ನಡೆ ಹಾಸ್ಯಾಸ್ಪದವಾಗಿದೆ ಎಂದು ನರಸಿಂಹರಾಜಪುರ ಭೂ ಮತ್ತು ನ್ಯಾಯ ಮಂಡಳಿಯ ನಾಮನಿರ್ದೇಶಿತ ಸದಸ್ಯ ಕಾರ್ತಿಕ್ ಕಾರ್ ಗದ್ದೆ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಎಂಟು ವರ್ಷಗಳಲ್ಲಿ ಶಾಸಕ ಟಿ.ಡಿ. ರಾಜೇಗೌಡ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಜನರ ಕಣ್ಮುಂದೆಯೇ ಇವೆ ಎಂದು ಹೇಳಿದರು. ಜಯಪುರ ರಸ್ತೆ ಅಗಲೀಕರಣ, ನಾಡಕಚೇರಿಗಳ ಅಭಿವೃದ್ಧಿ, ಬಾಳೆಹೊನ್ನೂರು ಬಸ್ ನಿಲ್ದಾಣ ಸೇರಿದಂತೆ ಹಲವು ಯೋಜನೆಗಳನ್ನು ಉಲ್ಲೇಖಿಸಿ, ಅವುಗಳ ಬಗ್ಗೆ ಮಾತನಾಡದೆ ತಡೆಗೋಡೆ ವಿಚಾರವನ್ನೇ ಮುಂದಿಟ್ಟು ರಾಜಕೀಯ ಮಾಡುವುದು ಸಮಂಜಸವಲ್ಲ ಎಂದು ಟೀಕಿಸಿದರು.

ಕಳೆದ 15 ವರ್ಷಗಳ ಕಾಲ ಬಿಜೆಪಿ ಶಾಸಕರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಎಷ್ಟರ ಮಟ್ಟಿಗೆ ನಡೆದಿದೆ ಎಂಬುದನ್ನು ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಶಾಸಕ ಟಿ.ಡಿ. ರಾಜೇಗೌಡ ಅವರು ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಜನಸೇವೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೈಯಕ್ತಿಕ ಟೀಕೆಗಳನ್ನು ಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಕಾರ್ತಿಕ್ ಕಾರ್ ಗದ್ದೆ, ದೇಶದ ಜನರಿಗೆ ಬಿಜೆಪಿಯ ವೈಫಲ್ಯಗಳು ಈಗಾಗಲೇ ತಿಳಿದಿವೆ. ಬೆಲೆ ಏರಿಕೆ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪ, ರಸಗೊಬ್ಬರಗಳ ಬೆಲೆ ಏರಿಕೆ ಹಾಗೂ ಚಿನ್ನದ ಬೆಲೆ ಏರಿಕೆ ಮುಂತಾದ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಮೊದಲು ಬಿಜೆಪಿ ಮಾತನಾಡಬೇಕು. ನಂತರ ಶೃಂಗೇರಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಲಿ ಎಂದು ಹೇಳಿದರು. (ವರದಿ- ಶಶಿ ಬೆತ್ತದಕೊಳಲು)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.