ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ಕಾಂತಾರ-1 ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ಶನಿವಾರ ನಡೆದಿರುವ ಬಗ್ಗೆ ವರದಿಯಾಗಿದೆ. ಅದೃಷ್ಟವಶಾತ್ ಚಿತ್ರ ತಂಡದ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಎರಡು ದಿನಗಳ ಹಿಂದೆ ಸಹ ಕಲಾವಿದ ವಿಜು ವಿಕೆ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಕಾಂತಾರ-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೆದಿದೆ. ಶನಿವಾರ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಿಷಬ್ ಶೆಟ್ಟಿ ಸೇರಿ 30 ಜನ ಕಲಾವಿದರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ. ಬೋಟ್ನಲ್ಲಿದ್ದವರು ಬಚಾವಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿದೆ ಎಂದು ತಿಳಿದುಬಂದಿದೆ. ಘಟನೆ ಬೆನ್ನಲ್ಲೇ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದೆ.












