ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗರದ ಕೆಎಸ್‌ಆರ್‌ಟಿಸಿ ಬಸ್ ಡಿಪೊ ಬಳಿ ನಿರ್ಜನ ಪ್ರದೇಶದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ.
ಒಂದು ದಿನದ ಹಿಂದೆ ಜನಿಸಿರುವ ಮಗು ಎಂದು ಅಂದಾಜಿಸಲಾಗಿದ್ದು, ಆಸ್ಪತ್ರೆಯಲ್ಲಿ ಹೊಕ್ಕಳ ಬಳ್ಳಿಗೆ ಹಾಕಿರುವ ಕ್ಲಿಪ್ ಕೂಡ ಹಾಗೆ ಇದೆ.
ಮಗುವಿನ ಶವವನ್ನು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದ ಪೊಲೀಸರು, ಕ್ಲಿಪ್ ಆಧರಿಸಿ ಮಗುವಿನ ತಾಯಿ ಯಾರು ಎಂಬುದರ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.















