ಮಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಉಳ್ಳಾಲ ಸಮುದ್ರ ತೀರದಲ್ಲಿ ಕಾಂಗ್ರೆಸ್ ಮುಖಂಡನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸಂಗಮೇಶ್ವರ ಪೇಟೆಯ ಮುಕ್ತಿಯಾರ್ ಅಹಮದ್ ಎಂದು ಗುರುತಿಸಲಾಗಿದೆ.
ಸ್ಥಳೀಯರು ಸಮುದ್ರ ತೀರದಲ್ಲಿ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮುಕ್ತಿಯಾರ್ ಅಹಮದ್ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದು, ಅವರ ಸಾವಿನ ಕುರಿತು ವಿವಿಧ ಅನುಮಾನಗಳು ವ್ಯಕ್ತವಾಗಿವೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ.















