ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮಲವಗೊಪ್ಪದ ಭದ್ರಾ ಎಡದಂಡೆ ಕಾಲುವೆಯಲ್ಲಿ ಸ್ನೇಹಿತರ ಜೊತೆ ಈಜಲು ತೆರಳಿದ್ದ ಬಾಲಕ ಮೃತಪಟ್ಟ ಘಟನೆ ನಡೆದಿದೆ.
ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ

ಹರಿಗೆ ನಿವಾಸಿ ಶಂಕರ್ (14) ಶನಿವಾರ ಮಧ್ಯಾಹ್ನದ ಸ್ನೇಹಿತರ ಜೊತೆ ಮಲವಗೊಪ್ಪದ ಚನ್ನಬಸವೇಶ್ವರ ದೇವಸ್ಥಾನದ ಬಳಿಯ ಚಾನಲ್ನಲ್ಲಿ ಈಜಲು ತೆರಳಿದ್ದ. ಚಾನಲ್ಗೆ ಬಿದ್ದ ವೇಳೆ ಮೇಲೆ ಬರಲಾಗದೆ ನೀರಿನಲ್ಲಿ ಕೊಚ್ಚಿ ಹೋಗಿದ್ದ. ಸಂಜೆ ವೇಳೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ಆರಂಭಿಸಿದರೂ ಹೆಚ್ಚಿನ ನೀರು ಇದ್ದ ಕಾರಣ ಪತ್ತೆಯಾಗಿರಲಿಲ್ಲ.
ಭಾನುವಾರ ನೀರು ಕಡಿಮೆ ಮಾಡಿ ಹುಡುಕಾಟ ನಡೆಸಿದ್ದು ಬಿದ್ದ ಜಾಗದಿಂದ 100 ಮೀಟರ್ ಅಂತರದಲ್ಲಿ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ: ಮಾ.18 ರಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ














