ಚಿಕ್ಕಮಗಳೂರು: ಧ್ವಜ ಹಾರಾಟ ಬೆನ್ನಲ್ಲೇ ಫ್ರೀ ಪ್ಯಾಲೆಸ್ತೀನ್ ಟೀ ಶರ್ಟ್​ ಧರಿಸಿ ಯುವಕ ಪೋಸ್ಟ್​

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಯುವಕನೋರ್ವ ಫ್ರೀ ಪ್ಯಾಲೆಸ್ತೀನ್ ಬರಹ ಮತ್ತು ಧ್ವಜವಿರುವ ಟೀ ಶರ್ಟ್ ಹಾಕಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾನೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಣಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಯುವಕನ ಪೋಸ್ಟ್ ಕಂಡ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ತನಿಖೆಗೆ ಒತ್ತಾಯಿಸಿದ ಸಿ. ಟಿ ರವಿ:
ಪ್ಯಾಲೆಸ್ತೀನ್ ಗೂ ಇವರಿಗೂ ಏನು ಸಂಬಂಧ, ಇವರಿಗೆ ಪ್ಯಾಲೆಸ್ತೀನ್ ಧ್ವಜ, ಟೀ ಶರ್ಟ್ ಸಿಕ್ಕಿದ್ದೆಲ್ಲಿ, ತಯಾರಿಸಿದ್ದೆಲ್ಲಿ ಇದರ ಬಗ್ಗೆ ಪೊಲೀಸರು ತನಿಖೆ ಮಾಡಬೇಕು. ರಾಜ್ಯದಾದ್ಯಂತ ವರದಿಯಾಗಿರುವ ಪ್ಯಾಲೆಸ್ತೀನ್ ಧ್ವಜ ಹಾರಾಟ ಮತ್ತು ಘೋಷಣೆ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು, ತನಿಖೆ ನಡೆಸಬೇಕು ಎಂದು ಸಿ. ಟಿ ರವಿ ಆಗ್ರಹಿಸಿದರು.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ


ಈ ಹಿಂದೆ ಪ್ಯಾಲೆಸ್ತೇನ್ ಧ್ವಜ ಹಿಡಿದು ಯುವಕರ ಓಡಾಟ:
ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿರುವಾಗ ಮುಸ್ಲಿಂ ಯುವಕರು ಪ್ಯಾಲೆಸ್ತೇನ್ ಧ್ವಜ ಹಿಡಿದು ಓಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಧ್ವಜ ಹಿಡಿದು ಓಡಾಡಿರುವ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ನಗರದ ಪೊಲೀಸ್ ಠಾಣೆಯ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯನ್ನು ಕೂಡ ನಡೆಸಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.