ಕೊಟ್ಟಿಗೆಹಾರ: BSNL ನೆಟ್ವರ್ಕ್ ನಾಪತ್ತೆ : ಒಂದು ತಿಂಗಳಿಂದ ಜನ ಕಂಗಾಲು

ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಕಳೆದ ಒಂದು ತಿಂಗಳಿಂದ ಕೊಟ್ಟಿಗೆಹಾರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ BSNL ಮೊಬೈಲ್ ನೆಟ್ವರ್ಕ್ ಸಂಪೂರ್ಣ ಸ್ಥಗಿತಗೊಂಡಿದ್ದು, ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.


ಇದನ್ನೂ ಓದಿ: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ


ಗ್ರಾಮೀಣ ಪ್ರದೇಶದ ಬಹುತೇಕ ಜನರು BSNL ಸಿಮ್ ಬಳಸುತ್ತಿರುವ ಹಿನ್ನೆಲೆಯಲ್ಲಿ, ತುರ್ತು ಸಂದರ್ಭಗಳಲ್ಲಿ — ವಿಶೇಷವಾಗಿ ಆರೋಗ್ಯ ಸಮಸ್ಯೆ, ಸರ್ಕಾರಿ ಕಚೇರಿ ಸಂಪರ್ಕ ಹಾಗೂ ಕುಟುಂಬ ಸದಸ್ಯರ ನಡುವೆ ಸಂವಹನ ಕಷ್ಟಕರವಾಗಿದೆ.

“ಒಂದು ಕರೆ ಮಾಡಲು ಹಳ್ಳಿಯ ಹೊರವಲಯಕ್ಕೆ ಹೋಗಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಸಹಾಯ ಪಡೆಯಲು ತುಂಬಾ ಕಷ್ಟ ಆಗುತ್ತಿದೆ,” ಎಂದು ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ


ಒಂದೆಡೆ ಮೊಬೈಲ್ ನೆಟ್ವರ್ಕ್ ಇಲ್ಲದೇ ಬ್ಯಾಂಕ್ ವ್ಯವಹಾರಗಳು, ಆನ್‌ಲೈನ್ ಪಾವತಿಗಳು ಮತ್ತು ವಿದ್ಯಾರ್ಥಿಗಳ ಶಿಕ್ಷಣ ಸಂಬಂಧಿ ಕಾರ್ಯಗಳು ಅಸ್ತವ್ಯಸ್ತಗೊಂಡಿವೆ. ಸ್ಥಳೀಯರು ಹಲವಾರು ಬಾರಿ BSNL ಅಧಿಕಾರಿಗಳಿಗೆ ದೂರವಾಣಿ ಮತ್ತು ಲಿಖಿತ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರು, ವರ್ತಕರು ಹಾಗೂ ಆಟೋ ಸಂಘದವರು ಕೂಡ ತಕ್ಷಣ ನೆಟ್ವರ್ಕ್ ದೋಷ ಸರಿಪಡಿಸಿ ಸೇವೆ ಪುನಃ ಆರಂಭಿಸಲು ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ


Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.