ಹಲವು ಪ್ರಶಸ್ತಿ ಮುಡಿಗೇರಿಸಿಕೊಂಡ ಬುಡೋಕಾನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ʼನ ವಿದ್ಯಾರ್ಥಿಗಳು

ಶಿವಮೊಗ್ಗ/ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ‌ ಬುಡೋಕಾನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇದರ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ


ಕರ್ನಾಟಕದ ಪ್ರಸಿದ್ಧ ಸಂಸ್ಥೆಯಾದ ಬುಡೋಕಾನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇದರ ಕೊಪ್ಪ, ಬಾಳೆಹೊನ್ನೂರು, ಜಯಪುರ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಯನ್ನು ತಂಡ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸ್ಪರ್ಧಾಕೂಟದ ಆಯೋಜಕರಾದ ಶಿವಮೊಗ್ಗ ವಿನೋದ್ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಮತ್ತು ಉಡುಪಿ ಬುಡೋಕಾನ್ ಕರಾಟೆ ಕರ್ನಾಟಕ ಇದರ ಅಧ್ಯಕ್ಷ ವಾಮನ್ ಪಾಲನ್, ಕಾರ್ಯದರ್ಶಿ ರಘುರಾಜ್ ಪಾಣಿ ಆಡಿ, ಕೋಶಾಧಿಕಾರಿ ಅಶೋಕ್ ಕುಲಾಲ್ ಹಾಗೂ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರು.


ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.