ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಒಬ್ಬ ಮಹಿಳೆ ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನ.4ರ ಶನಿವಾರ ನಡೆದಿದೆ. ಯಲಹಂಕ ನಿವಾಸಿ ಸುರೇಖಾ (45) ಮೃತ ಮಹಿಳೆ.
ಇದನ್ನೂ ಓದಿ; ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?

ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ ನಲ್ಲಿ ಸುಮಾರು 48ಕ್ಕೂ ಹೆಚ್ಚು ಪ್ರವಾಸಿಗರಿದ್ದು, ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದ ಬಸ್ ಇದಾಗಿದೆ. ಇಂದು ಬೆಳಗಿನ ಜಾವ 4:45 ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿರುವ ಐವರಿಗೆ ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
ತಡೆಗೋಡೆ ಇಲ್ಲದ ರಸ್ತೆಗಳು:
ಇದೇ ಜಾಗದಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿದ್ದು, ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸುವಂತೆ ಸ್ಥಳಿಯರು ಹಲವು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಬಸ್ ಸೇರಿ ಹಲವು ವಾಹನಗಳು ಕಂದಕಕ್ಕೆ ಉರುಳುವುದು ಸಾಮಾನ್ಯ ಎಂಬಂತಾಗಿದೆ.
ಚಿಕ್ಕಮಗಳೂರು: ಲಂಚಬಾಕ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಂಗನಾಥಸ್ವಾಮಿ ಹಾಗೂ ದ್ವಿತಿಯ ದರ್ಜೆ ಸಹಾಯಕ ಅಸ್ರಾರ್ ಅಹಮದ್ ಲಂಚಕ್ಕೆ ಬೇಡಿಕೆ ಇಟ್ಟ ಕಾರಣ ಕಾಂಟ್ರ್ಯಾಕ್ಟರ್ ಓರ್ವರ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಶಿಕ್ಷಣ ಇಲಾಖೆ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ, ಶಾಲಾ ಶೌಚಾಲಯ ನಿರ್ಮಾಣ ಯೋಜನೆ ಅಡಿ ಶೌಚಾಲಯ ನಿರ್ಮಾಣ ಮಾಡಲು ಡಿಡಿಪಿಐ, ರಂಗನಾಥಸ್ವಾಮಿ, ಮತ್ತು ಅವರ ಕಛೇರಿ ಸಿಬ್ಬಂದಿ ಅಸ್ರಾರ್ ಅಹಮ್ಮದ್ 2% ರಂತೆ 10,000/- ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರು ಲೋಕಾಯಕ್ತ ಪೊಲೀಸ್ ಠಾಣೆಗೆ ನೀಡಿದ ಲಿಖಿತ ದೂರಿನ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ರಂಗನಾಥಸ್ವಾಮಿ ಮತ್ತು ಅವರ ಕಛೇರಿಯ ಸಿಬ್ಬಂದಿ ಅಸ್ರಾರ್ ಅಹಮ್ಮದ್, ದ್ವಿತಿಯ ದರ್ಜೆ ಸಹಾಯಕರು ಈ ಇಬ್ಬರನ್ನೂ ಲೋಕಾಯುಕ್ತ ಪೊಲೀಸರು ಲಂಚ ಪಡೆಯುವ ವೇಳೆ ಬಂಧಿಸಿದ್ದಾರೆ.
ಈ ದಾಳಿಯಲ್ಲಿ ಡಿವೈಎಸ್ಪಿ ಜೆಜೆ ತಿರುಮಲೇಶ್ , ಇನ್ಸ್ಪೆಕ್ಟರ್ಗಳಾದ ಮಲ್ಲಿಕಾರ್ಜುನ್, ಅನಿಲ್ ರಾಥೋಡ್, ಸಿಬ್ಬಂದಿ ಲೋಕೇಶ್, ವೇದಾವತಿ, ವಿಜಯ ಭಾಸ್ಕರ್, ಸಲ್ಮಾ ಬೇಗಮ್, ಅನಿಲ್ ನಾಯಕ್, ಪ್ರಸಾದ್ ,ರವಿ, ಮುಜೀಬ್ ಪಾಲ್ಗೊಂಡಿದ್ದರು












