ಕಳಸ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಸ್ ನುಗ್ಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ನಡೆದಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ನಿಮ್ಮ ಬಾಕಿ ದಂಡವನ್ನು ಶೇ.50 ರ ರಿಯಾಯಿತಿಯೊಂದಿಗೆ ಪಾವತಿಸಲು ಡಿ.12 ಕೊನೆಯ ದಿನ

ಪಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶುಕ್ರವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.
ಕಳಸದಿಂದ ಬೆಳಗ್ಗೆ 8.45ಕ್ಕೆ ಹೊರಡುತ್ತಿದ್ದ ಈ ಬಸ್ ಕೆಲ ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿತ್ತು. ಕೆಲ ದಿನಗಳ ಹಿಂದೆಯಷ್ಟೇ ಮತ್ತೆ ಆರಂಭಗೊಂಡಿತ್ತು. ಈ ಸಮಯಕ್ಕೆ ಹೊರಡುವ ಬಸ್ನಿಂದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೂ ಅನುಕೂಲವಾಗುತ್ತಿತ್ತು. ಘಟನೆ ಸಂದರ್ಭದಲ್ಲೂ ಹೆಚ್ಚಾಗಿ ವಿದ್ಯಾರ್ಥಿಗಳೇ ಬಸ್ನಲ್ಲಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಗಮನಕ್ಕೆ; ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ












