ಚಿಕ್ಕಮಗಳೂರು: KSRTC ಬಸ್ ಹರಿದು ವೃದ್ಧೆ ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವೃದ್ಧೆಯೊಬ್ಬರ ಮೇಲೆ KSRTC ಬಸ್ ಹರಿದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದಲ್ಲಿ ನಡೆದಿದೆ. ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದ ಪುಟ್ಟಮ್ಮ (80) KSRTC ಬಸ್ ಹರಿದು ಸಾವನ್ನಪ್ಪಿರುವ ವೃದ್ಧೆ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಬಸ್ ಟರ್ನ್ ಮಾಡುವಾಗ KSRTC ಬಸ್ ವೃದ್ಧೆಗೆ ಗುದ್ದಿದ್ದು, ಬಸ್ಸಿನ ಮುಂಭಾಗದ ಚಕ್ರಕ್ಕೆ ವೃದ್ಧೆ ಸಿಲುಕಿದ್ದಾರೆ. ವೃದ್ಧೆಯ ಹೊಟ್ಟೆಯ ಮೇಲೆ ಬಸ್ ಚಕ್ರ ಹತ್ತಿದ ಪರಿಣಾಮ ಹೊಟ್ಟೆಯಿಂದ ಕರುಳು ಹೊರಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಕೂಡಲೇ ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದರೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ


ಚಿಕಿತ್ಸೆ ಪಡೆಯಲು ಪುಟ್ಟಮ್ಮ ಚಿಕ್ಕಮಗಳೂರಿನ ಆಸ್ಪತ್ರೆಗೆ ಬಂದಿದ್ದರು. ವಾಪಾಸ್ ಗ್ರಾಮಕ್ಕೆ ತೆರಳಲು ಸರ್ಕಾರಿ ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಈ ಒಂದು ದುರಂತ ಸಂಭವಿಸಿದೆ. ಘಟನೆ ಕುರಿತಂತೆ ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.