2 ಕೋಟಿ ದೇಣಿಗೆ ನೀಡಿ ಮಗನನ್ನು ಶಾಲೆಗೆ ಸೇರಿಸಿದ ಉದ್ಯಮಿ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದಲ್ಲಿರುವ ಮುತ್ತಿಗೆರೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಉದ್ಯಮಿಯೊಬ್ಬರು 2 ಕೋಟಿ ದೇಣಿಗೆ ನೀಡಿದ್ದಲ್ಲದೇ ಅದೇ ಶಾಲೆಗೆ ತಮ್ಮ ಮಗನಿಗೆ ಶಿಕ್ಷಣ ಕೊಡಿಸುವ ಮೂಲಕ ಮಾದರಿಯಾಗಿದ್ದಾರೆ.


ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌; ಆಕರ್ಷಕ ಸಂಬಳ, ಅರ್ಜಿ ಲಿಂಕ್‌ ಇಲ್ಲಿದೆ ನೋಡಿ


ಹೌದು, ಮುದ್ರೆಮನೆ ಕಾಫಿ ಕ್ಯೂರಿಂಗ್ ಮಾಲೀಕ ಸಂತೋಷ ಎನ್ನುವವರು ಮುತ್ತಿಗೆರೆಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದಲ್ಲಿ 8 ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದು, ಫೆ. 28ರಂದು ಉದ್ಘಾಟನೆಗೊಳ್ಳಲಿದೆ.

ಇನ್ನು ದಾನಿಗಳ ಸಹಕಾರದಿಂದ ಮುಂದಿನ ದಿನಗಳಲ್ಲಿ ಮಕ್ಕಳ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ. ಈ ಶಾಲೆಯಲ್ಲಿ ಸರ್ಕಾರದ ವಿವೇಕ ಯೋಜನೆಯಡಿ 4 ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ಒಟ್ಟು 12 ಕೊಠಡಿಗಳನ್ನು ನೂತನವಾಗಿ ನಿರ್ಮಿಸಲಾಗಿದೆ. ಸಂತೋಷ್ ಅವರು ಈ ಹಿಂದೆ 18 ಲಕ್ಷ ರೂ. ವೆಚ್ಚದಲ್ಲಿ ಪ್ರಾರ್ಥನಾ ಮಂದಿರ ಕಟ್ಟಿಸಿ ಕೊಟ್ಟಿದ್ದಾರೆ. ಸಿದ್ದಿಕ್ ಎಂಬುವರು 60 ಸಾವಿರ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಯಂತ್ರ ದೇಣಿಗೆಯಾಗಿ ನೀಡಿದ್ದಾರೆ. ಶರ್ಮಿನ್ ವಿಲಿಯಮ್ಸ್ ಕಂಪೆನಿ 18 ಲಕ್ಷ ರೂ. ವೆಚ್ಚದಲ್ಲಿ ಪೀಠೋಪಕರಣ ದೇಣಿಗೆಯಾಗಿ ನೀಡಿದೆ. ಯೂತ್ ಫಾರ್ ಸೇವಾ ಟ್ರಸ್ಟ್‌ನವರು 8 ಕಂಪ್ಯೂಟರ್‌ ಗಳನ್ನು ನೀಡಿದ್ದಾರೆ.


ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ


ಶಾಲೆಯಲ್ಲಿ 12 ಸಿಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಉತ್ತಮ ಶಾಲೆ ಪ್ರಶಸ್ತಿ, ಸ್ವತ್ಥ ಶಾಲೆ ಪ್ರಶಸ್ತಿ, ಅಕ್ಷರ ದಾಸೋಹ ಉತ್ತಮ ನಿರ್ವಹಣೆ ಪ್ರಶಸ್ತಿ, ಈ ಹಿಂದೆ ಶಾಲೆಯಲ್ಲಿ ಕಾರ್ಯ ನಿರ್ವಹಿಸಿದ್ದ ಶಿಕ್ಷಕಿ ರೇಣುಕಾ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ, ಇಲ್ಲಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

363 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಕೊಠಡಿಗಳ ಕೊರತೆ ಇತ್ತು. ಮುದ್ರೆಮನೆ ಕಾಫಿ ಕ್ಯೂರಿಂಗ್ ಮಾಲಕ ಸಂತೋಷ್ 8 ಹೈಟೆಕ್ ಕೊಠಡಿಗಳ ನಿರ್ಮಾಣಕ್ಕೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ದಾನಿಗಳ ಸಹಕಾರದಿಂದ ಸರ್ಕಾರಿ ಶಾಲೆಯನ್ನು ಖಾಸಗಿ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಿದ್ದು ಮಾದರಿ ಶಾಲೆಯಾಗಿದೆ ಎಂದು ಪ್ರಭಾರ ಮುಖ್ಯ ಶಿಕ್ಷಕಿ ಭಾರತಿ ಹೇಳಿದರು.


ಇದನ್ನೂ ಓದಿ: ಕಾಳು ಮೆಣಸಿಗೆ ಜಿಎಸ್‌ಟಿ ರದ್ದು..!; ಏನಿದು ಸುದ್ದಿ? ಮಿಸ್‌ ಮಾಡ್ದೆ ಓದಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.