ಉಡುಪಿ: (ನ್ಯೂಸ್ ಮಲ್ನಾಡ್ ವರದಿ) ಚೈತ್ರ ಕುಂದಾಪುರದಿಂದ ಮೋಸ ಹೋದ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವಧೂತ ವಿನಯ ಗುರೂಜಿಯವರಿಗೆ ಪತ್ರ ಬರೆದಿದ್ದು, ಇದರಲ್ಲಿ ಅವರು ನಡೆದಿರುವ ಘಟನೆ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾರೆ.
ಇದನ್ನೂ ಓದಿ; HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?

ಏನಿದೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಬರೆದ ಪತ್ರದಲ್ಲಿ:
ಕಷ್ಟಕರ ಪರಿಸ್ಥಿತಿಯಲ್ಲಿ ನಾನು ಏಳನೇ ತರಗತಿ ವಿದ್ಯಾಭ್ಯಾಸ ಮಾಡಿ ಮುಂಬೈಗೆ ಹೋದೆ. ಮುಂಬೈ ಹೋಟೆಲ್ ಗಳಲ್ಲಿ ಪ್ಲೇಟ್ ತೊಳೆದು ಜೀವನವನ್ನು ರೂಪಿಸಿದ್ದೇನೆ. ಕೆಲಸ ಮಾಡುತ್ತಾ ಫೈವ್ ಸ್ಟಾರ್ ಹೋಟೆಲ್ ಗೆ ಸೇರಿಕೊಂಡೆ. ಐದು ಜನರಿಂದ ಒಂದು ಉದ್ಯಮವನ್ನು ನಾನು ಆರಂಭ ಮಾಡಿದೆ. ತಮಿಳುನಾಡು, ಗುಜರಾತ್, ಆಂಧ್ರದಲ್ಲಿ ಮನೆ ಕಂಪನಿಗೆ ಫುಡ್ ಸರ್ವಿಸ್ ಶುರು ಮಾಡಿದೆ. ಲಾಭದಲ್ಲಿ ವೃದ್ಧಾಶ್ರಮ, ಅನಾಥಾಶ್ರಮ, ಕೋವಿಡ್ ಸಂದರ್ಭ ಶಿಕ್ಷಣಕ್ಕೆ ಸಹಾಯ ಮಾಡಿದೆ. ನನ್ನ ಜೀವನದಲ್ಲಿ ಈವರೆಗೆ 20 ಸಾವಿರ ಮನೆ ಜನಗಳಿಗೆ ಸಹಾಯ ಮಾಡಿದ್ದೇನೆ. ಹಿರಿಯರ ಮಾರ್ಗದರ್ಶನದಂತೆ ನಾನು ಆರ್.ಎಸ್.ಎಸ್ ನ ಐಟಿಸಿ ಕೋರ್ಸ್ ಅನ್ನು ಮುಗಿಸಿದೆ. ಊರಿನವರ ಆಪ್ತರ ಹಿತೈಷಿಗಳ ಮಾರ್ಗದರ್ಶನದಂತೆ ಬಿಜೆಪಿ ಸೇರ್ಪಡೆಯಾದೆ.
ಕಳೆದ ಆರು ವರ್ಷಗಳಿಂದ ನಾನು ಬಿಜೆಪಿಯ ಸದಸ್ಯತ್ವ ಸ್ವೀಕರಿಸಿದ್ದೇನೆ. ನನ್ನ ಜೊತೆ ಕೆಲಸ ಮಾಡುತ್ತಿದ್ದ ಪ್ರಸಾದ್ ಬೈಂದೂರು ಚೈತ್ರಾಳನ್ನು ಮೊದಲು ಪರಿಚಯ ಮಾಡಿದ್ದಾನೆ. ಚೈತ್ರಾ ನಂತರ ಗಗನ್ ಕಡೂರು ಪರಿಚಯ ಮಾಡಿಸಿದಳು. ಬಿಜೆಪಿ ಮತ್ತು ಆರ್.ಎಸ್.ಎಸ್ ಎಂದು ವಿಶ್ವನಾಥ್ ಜಿ, ಅಭಿನವ ಸ್ವಾಮೀಜಿ, ನಾಯ್ಕ್ ಒಬ್ಬೊಬ್ಬರಾಗಿ ಪರಿಚಯಿಸಿದರು. ಆಮೇಲೆ ಚಿಕ್ಕಮಗಳೂರು, ಬೆಂಗಳೂರು, ಮಂಗಳೂರಿನಲ್ಲಿ ಹಂತವಾಗಿ 5.50 ಕೋಟಿ ಪಡೆದರು. ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಹರಿದ 10 ರೂ. ನೋಟು ಮೂಲಕ ಹಣ ವರ್ಗಾವಣೆಯಾಗಿದೆ. ಅರ್ಧ ನೋಟಿನ ಕೋಡ್ ವಾರ್ಡ್ ಮೂಲಕ ನಾವು ಹಣ ಹಸ್ತಾಂತರ ಮಾಡಿದ್ದೇವೆ. ನನ್ನ ಆಸ್ತಿಯನ್ನು ಅಡ ಇಟ್ಟು ಒಮ್ಮೆ ಮೂರು ಕೋಟಿ ಸಾಲ ಪಡೆದಿದ್ದೇನೆ. ಇನ್ನೆರಡು ಕೋಟಿ ಬೇಕು ಎಂದು ಚೈತ್ರ ಗ್ಯಾಂಗ್ ಬೇಡಿಕೆ ಇಟ್ಟಿದ್ದು, ಮತ್ತೆ ಖಾಸಗಿ ಫೈನಾನ್ಸ್ ನಿಂದ 2 ಕೋಟಿ ಸಾಲ ಪಡೆದುಕೊಂಡೆ ಎಂದು ವಿವರಿಸಿದ್ದಾರೆ.
ಪತ್ರದ ಜೊತೆ ಎರಡು ವಾಯ್ಸ್ ನೋಟ್ ಗಳು ಕೂಡ ಲಭ್ಯ:
ಅವಧೂತ ಗುರೂಜಿಗೆ ಗೋವಿಂದ ಬಾಬು ಪೂಜಾರಿ ಪತ್ರದ ಕೊನೆಗೆ ರಾಷ್ಟ್ರೀಯ ಪಕ್ಷ, ಆರ್ಎಸ್ಎಸ್ ಸಂಘ ಎಂದು ಹೇಳಿ ನನಗೆ ಮೋಸ ಮಾಡಿದರು. ರಾಜಕೀಯದ ಆಮೀಷ ತೋರಿಸಿ ನನ್ನನ್ನು ಹಳ್ಳಕ್ಕೆ ತಳ್ಳಿದರು. ಹಿರಿಯರಾದ ತಾವು ನನಗೆ ದಾರಿ ತೋರಿಸಬೇಕು. ಕಾನೂನು ಮತ್ತು ಪೊಲೀಸ್ ವ್ಯವಸ್ಥೆ ಮೇಲೆ ನನಗೆ ನಂಬಿಕೆ ಇದೆ. ನನಗೆ ನ್ಯಾಯ ಒದಗಿಸಲು ಸಹಕಾರ ಮಾಡಿ ಎಂದು ಹೇಳುವ ಮೂಲಕ ಪತ್ರ ಕೊನೆಗೊಳಿಸಿದ್ದಾರೆ. ಅದರ ಜೊತೆ ಎರಡು ವಾಯ್ಸ್ ನೋಟ್ ಗಳು ಲಭ್ಯವಾಗಿದೆ.
ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Nipah Virus: ಕೇರಳಿಗರಿಂದ ಕಾಫಿನಾಡಿಗರಲ್ಲಿ ಹೆಚ್ಚಿದ ನಿಫಾ ವೈರಸ್
Nipah Virus: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ, ಮೈಸೂರು, ಚಾಮರಾಜನಗರ ಸೇರಿದಂತೆ ಕಾಫಿನಾಡಿನಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದೆ.
ಏನಿದು ನಿಫಾ ವೈರಸ್:
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ನಿಫಾ ಒಂದು ಝೂನೋಟಿಕ್ ವೈರಸ್ – ಅಂದರೆ ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದಾದ ವೈರಸ್ ಆಗಿದೆ. ಇದು ತೀವ್ರವಾದ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ ಮತ್ತು ಅನೇಕ ಸಂದರ್ಭಗಳಲ್ಲಿ ಮೆದುಳಿನ ಮೇಲೂ ದಾಳಿ ಮಾಡುತ್ತದೆ. ಇದರಿಂದ ಸಾವುಗಳೂ ಸಂಭವಿಸುತ್ತದೆ.
ಹಾಗಾದರೆ ನಿಫಾ ವೈರಸ್ ಹೇಗೆ ಹರಡುತ್ತದೆ:
ಪ್ಟೆರೋಪಸ್ ಎಂಬ ಜಾತಿಯ ಬಾವಲಿಗಳ ಮಲ, ಮೂತ್ರ ಅಥವಾ ಲಾಲಾರಸದಿಂದ ಕಲುಷಿತಗೊಂಡಿರುವ ಹಣ್ಣಿನ ಸೇವನೆಯಿಂದ ನಿಫಾ ವೈರಸ್ ಹರಡುತ್ತದೆ ಎಂದು ಭಾವಿಸಲಾಗಿದೆ. ಬಾವಲಿಗಳು ಸೇವಿಸಿದ ಕೊಳೆತ ಹಣ್ಣುಗಳನ್ನು ಸೇವಿಸುವ ಹಂದಿಗಳಿಂದ ಈ ವೈರಸ್ ಮಾನವರಿಗೂ ಹರಡಬಹುದು. ನಂತರ ನಿಫಾ ವೈರಸ್ ಸೋಂಕಿತ ವ್ಯಕ್ತಿಗಳೊಂದಿಗಿನ ನಿಕಟ ಸಂಪರ್ಕದಿಂದಲೂ ಹರಡುತ್ತದೆ. ಈ ಬಗ್ಗೆ ಇನ್ನೂ ಅಧ್ಯಯನಗಳು ನಡೆಯುತ್ತಲೇ ಇವೆ.
ಕಾಫಿನಾಡಿನಲ್ಲಿ ಈ ವೈರಸ್ ಗೆ ( Nipah Virus:) ಭಯ ಯಾಕೆ?;
ಕೇರಳ ರಾಜ್ಯದ ಪ್ರವಾಸಿಗರು ದಿನ ನಿತ್ಯ ಪ್ರವಾಸಿತಾಣಗಳಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಎಸ್ಪಿ ಕಚೇರಿ ಸಮೀಪದ ನಗರಸಭೆ ಆವರಣದ ಮರಗಳಲ್ಲಿರುವ ನೂರಾರು ಸಂಖ್ಯೆಯಲ್ಲಿ ಬಾವಲಿಗಳು ವಾಸಿಸುತ್ತಿವೆ. ಹೀಗಾಗಿ ಚಿಕ್ಕಮಗಳೂರು ನಗರದ ಹೃದಯ ಭಾಗದಲ್ಲಿ ನಿಫಾ ವೈರಸ್ ಹರಡುವ ಆತಂಕ ಎದುರಾಗಿದೆ.
ಇದನ್ನೂ ಓದಿ; arecanut price: 15 ಸೆಪ್ಟೆಂಬರ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ನಿಫಾ ವೈರಸ್ ಗೆ ಕಾಫಿನಾಡಿನಲ್ಲಿ ಮುಜಾಗ್ರತ ಕ್ರಮ ಏನು?
ಕಾಫಿನಾಡಿನಲ್ಲೂ ನಿಫಾ ವೈರಸ್ ಆತಂಕ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಹೈ ಅಲರ್ಟ್ ಆಗಿದ್ದು, ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ತೆರೆದಿದೆ. ಒಟ್ಟು ಆರು ಹಾಸಿಗೆಯ ವಾರ್ಡ್ ತೆರೆದು ಸಿದ್ಧತೆ ಮಾಡಿಕೊಂಡಿದೆ. ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯವುಳ್ಳ ಹೈಟೆಕ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಜಿಲ್ಲೆಯಲ್ಲಿ ಈವರೆಗೂ ಒಂದೇ ಒಂದು ನಿಫಾ ಪ್ರಕರಣ ಕೂಡ ದಾಖಲಾಗಿಲ್ಲ.












