ಚಿಕ್ಕಮಗಳೂರು: ಸಿ. ಟಿ. ರವಿ ಸ್ವಾಗತ ಮೆರವಣಿಗೆ ವೇಳೆ ಆಂಬುಲೆನ್ಸ್ ಬಳಕೆ ಆರೋಪ: FIR ದಾಖಲು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಎಂಎಲ್ಸಿ ಸಿ. ಟಿ ರವಿ ಸ್ವಾಗತ ಮೆರವಣಿಗೆ ವೇಳೆ ಆಂಬುಲೆನ್ಸ್ ಬಳಕೆ ಮಾಡಿರುವ ಆರೋಪದ ಮೇರೆಗೆ ಆಂಬುಲೆನ್ಸ್ ಮಾಲೀಕ ಹಾಗೂ ಚಾಲಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ವಿಧಾನ ಪರಿಷತ್ ಕಲಾಪದ ಸಂದರ್ಭದಲ್ಲಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪದಬಳಕೆ ಮಾಡಿದ್ದಾರೆಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ್ದ ದೂರಿನ ಅನ್ವಯ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧನ ಮಾಡಲಾಗಿತ್ತು. ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಬಿಡುಗಡೆಯಾಗಿ ಚಿಕ್ಕಮಗಳೂರಿಗೆ ತೆರಳಿದ್ದರು. ಈ ವೇಳೆ ಎಂಎಲ್ಸಿ ಸಿಟಿ ರವಿ ಸ್ವಾಗತ ಮೆರವಣಿಗೆ ವೇಳೆ ಆಂಬುಲೆನ್ಸ್ ಬಳಕೆ ಮಾಡಿದ್ದು, 7 ಆಂಬುಲೆನ್ಸ್ ಗಳಲ್ಲಿ ಸೈರನ್ ಲೈಟ್ ಹಾಕಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಿ ಆಂಬುಲೆನ್ಸ್ ಮಾಲೀಕ ಹಾಗೂ ಚಾಲಕರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ


ಸಾರ್ವಜನಿಕರ ಶಾಂತಿಭಂಗ ಆರೋಪದಡಿಯಲ್ಲಿ ಇದೀಗ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಸೋಮೊಟೊ ಕೇಸ್ ದಾಖಲಾಗಿದೆ.


ಇದನ್ನೂ ಓದಿ; ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.