ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿನಿಯರ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪ ಬಂದ್ ಗೆ ಕರೆ ನೀಡಲಾಗಿದೆ.
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..

ಕೊಪ್ಪದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 2023ರಲ್ಲಿ ಅಮೂಲ್ಯ ಹಾಗೂ 2025ರಲ್ಲಿ ಶಮಿತಾ ಅನುಮಾನಸ್ಪದವಾಗಿ ಶೌಚಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆ ವತಿಯಿಂದ 11-09-2025 ರ ಗುರುವಾರ ಬೆಳಗ್ಗೆ 06 ರಿಂದ ಸಂಜೆ 06 ವರೆಗೆ ಕೊಪ್ಪ ಬಂದ್ ಹಾಗೂ ಮುಖ್ಯ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಕರೆ ನೀಡಲಾಗಿದೆ.
ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?












