ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಮುದ್ರೆಮನೆ ಗ್ರಾಮದ ಬಳಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಪರಿಣಾಮ ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ ಸ್ಕೂಟರ್ ಸವಾರ ಸಾಗರ್ (22) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ













