ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾರು ಟರ್ನ್ ಮಾಡುವಾಗ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನ ಕಾಲು ಮುರಿತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಬಣಕಲ್ ಮೂಲದ ಕಾರೊಂದು ರಸ್ತೆಯಲ್ಲಿ ಟರ್ನ್ ಮಾಡುವ ವೇಳೆ ನೇರವಾಗಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಕ್ ಮಕ್ಕಿ ಮೂಲದ ಬೈಕ್ ಸವಾರ ಮುಸಫಿರ್ ಅವರಿಗೆ ಕಾಲು ಮುರಿತವಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ದೃಶ್ಯಾವಳಿ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ













