ಹೊಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕಾರು ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ.25ರ ಬುಧವಾರ ನಡೆದಿದೆ. ಕಲ್ಲಜ್ಜನಾಳ್ ನಿವಾಸಿ ರಾಜಪ್ಪ (60) ಮೃತಪಟ್ಟ ದುರ್ದೈವಿ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ರಾಜಪ್ಪ ಅವರು ಬುಧವಾರ ಹೊಳೆಹೊನ್ನೂರಿನಿಂದ ಕಲ್ಲಜ್ಜನಾಳ್ ಕಡೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಚನ್ನಗಿರಿ ಕಡೆಯಿಂದ ಶಿವಮೊಗ್ಗದ ಕಡೆಗೆ ಅತೀ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಜಪ್ಪ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರು ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ತೆಂಗಿನ ಮರಕ್ಕೆ ಗುದ್ದಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ರಾಜಪ್ಪ ಅವರು ಕೊನೆಯುಸಿರೆಳೆದಿದ್ದಾರೆ.

ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!















