
ರಿಪ್ಪನ್ ಪೇಟೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.
ಇದನ್ನೂ ಓದಿ: ನಿವೃತ್ತಿ ಹೊಂದುವ ನೌಕರರಿಗೆ ಪಿಂಚಣಿ ಸೌಲಭ್ಯ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿ ಕಾರಿನಲ್ಲಿದ್ದವರನ್ನು ಮೇಲಕ್ಕೆತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: 10 HP ವರೆಗಿನ ಕೃಷಿ ಪಂಪ್ ಸೆಟ್ ಗಳಿಗೆ ಸಿಗಲಿದೆ ಸಬ್ಸಿಡಿ
ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ನಿಮ್ಮ ಬಾಕಿ ದಂಡವನ್ನು ಶೇ.50 ರ ರಿಯಾಯಿತಿಯೊಂದಿಗೆ ಪಾವತಿಸಲು ಡಿ.12 ಕೊನೆಯ ದಿನ













