ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬಸ್ ನಿಲ್ದಾಣದ ಬಳಿ ನಿಂತಿದ್ದ ಚಿನ್ನಿಗ ಗ್ರಾಪಂ ಅಟೆಂಡರ್ ಸುಧಾಕರ್ (37) ಎಂಬುವವರಿಗೆ ಗೂಡ್ಸ್ ವಾಹನ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲು ಚರ್ಚ್ ಬಳಿ ವೇಗವಾಗಿ ಗೂಡ್ಸ್ ವಾಹನ ಬಂದು ಕಾರಿಗೆ ಡಿಕ್ಕಿ ಹೊಡೆದು ಬಸ್ ನಿಲ್ದಾಣದ ಬಳಿ ನಿಂತಿದ್ದ ಸುಧಾಕರ್ ಮೇಲೆ ಗೂಡ್ಸ್ ವಾಹನ ಪಲ್ಟಿಯಾಗಿದೆ. ಪರಿಣಾಮ ಸುಧಾಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೂಡ್ಸ್ ವಾಹನದ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಭಾರತ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಜಾಬ್; SSLC, PUC ವಿದ್ಯಾರ್ಹತೆ
ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!













