
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ)ತಾಲೂಕಿನ ಬಾಳೂರು ಹೋಬಳಿಯ ನಿಡುವಾಳೆ ಸಮೀಪ ಭಾನುವಾರ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳು ಯುವಕರು ಮೂಡಿಗೆರೆ ತಾಲೂಕಿನ ಹಾರ್ಮಕ್ಕಿ ಗ್ರಾಮದ ಕಿರಣ್ ಹಾಗೂ ಪ್ರಫುಲ್ ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿ ಇದ್ದರು. ಈ ವೇಳೆ ಹೊರನಾಡು ದೇವಸ್ಥಾನದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಶಾಸಕಿ ನಯನ ಮೋಟಮ್ಮ ಅವರು ಘಟನೆ ಗಮನಿಸಿ ತತ್ ಕ್ಷಣ ನೆರವಿಗೆ ಧಾವಿಸಿದರು.

ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಕೊಂಡೊಯ್ದು ನಿಡುವಾಳೆ ಮಾರ್ಗವಾಗಿ ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಕೊಡಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನೆ ಮಾಡಲಾಗಿದೆ.

















