ಕೊಪ್ಪ: ಅಕ್ರಮ ಗೋ ಸಾಗಾಟಕ್ಕೆ ಬಳಸುತ್ತಿದ್ದ ಕಾರು ವಶಕ್ಕೆ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗುತ್ತಿದ್ದು ಇಂದು ಕೊಪ್ಪ ಸಬ್ ಇನ್ಸ್ ಪೆಕ್ಟರ್ ಮಧು ಅವರ ನೇತೃತ್ವದಲ್ಲಿ ಗೋ ಕಳ್ಳತನಕ್ಕೆ ಬಳಸುತ್ತಿದ್ದ ಇನ್ನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.


ನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಅಕ್ರಮ ಗೋ ಸಾಗಾಟ ಹೆಚ್ಚಾಗುತ್ತಿದ್ದ ಕುರಿತು ದೂರುಗಳು ಬಂದ ಕಾರಣ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದರು. ಇಂದು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋ ಕಳ್ಳತನಕ್ಕೆ ಬಳಸುತ್ತಿದ್ದ ಇನ್ನೋವಾ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕೊಪ್ಪ ಸಬ್ ಇನ್ಸ್ ಪೆಕ್ಟರ್ ಮಧು ಅವರ ನೇತೃತ್ವದಲ್ಲಿ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಈ ವೇಳೆ ಎಎಸ್‌ಐ ಮಹೇಶ್ ಮತ್ತು ಯುವರಾಜ್ ಪ್ರಕಾಶ್ ಪ್ರಶಾಂತ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಇದ್ದರು. ಇನ್ನು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಶಿವಮೊಗ್ಗ ಮೂಲದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.


ನ್ನೂ ಓದಿ: ಮಾ.18 ರಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.