ಕಳಸ: ಜಾನುವಾರುಗಳ ಕಳ್ಳತನ ಪ್ರಕರಣ: ಐವರು ಆರೋಪಿಗಳ ಬಂಧನ

ಕಳಸ: (ನ್ಯೂಸ್ ಮಲ್ನಾಡ್ ವರದಿ) ಜಾನುವಾರುಗಳನ್ನು ಕದ್ದು ಸಾಗಿಸುವಾಗ ಪರಾರಿಯಾಗಿದ್ದ ಐವರನ್ನು ಕಳಸ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.


ಇದನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಭದ್ರಾವತಿ ಮೂಲದ ಸಲ್ಮಾನ್ ಖಾನ್(21), ಸಾಹಿಲ್ (21), ಸಯ್ಯದ್ ತೌಫೀಖ್ (32), ಅಬ್ದುಲ್ ಅಜೀಜ್(34) ಮತ್ತು ಅಬ್ದುಲ್(22) ಬಂಧಿತ ಆರೋಪಿಗಳು.

ಜು.10 ರಂದು ಕಳಸ-ಹೊರನಾಡು ರಸ್ತೆಯ ದಾರಿಮನೆ ಸಮೀಪ ಜಾನುವಾರು ಸಾಗಿಸುವ ವಾಹನವನ್ನು ಪೊಲೀಸರು ಬೆನ್ನಟ್ಟಿದಾಗ ಕಳ್ಳರು ವಾಹನ ಬಿಟ್ಟು ಪರಾರಿಯಾಗಿದ್ದರು. ಪೊಲೀಸರು ವಾಹನ ಮತ್ತು ನಾಲ್ಕು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದರು.


ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ 5000 ರೂ; ಅರ್ಜಿ ಸಲ್ಲಿಸುವುದು ಹೇಗೆ?


ಪರಾರಿಯಾದ ಕಳ್ಳರ ಪತ್ತೆಗೆ ಕಳಸ ಠಾಣಾಧಿಕಾರಿ ಚಂದ್ರಶೇಖ‌ರ್, ಸಿಬ್ಬಂದಿ ಗಿರೀಶ್, ಶಿವಕುಮಾರ್, ನಿಖಿಲ್, ಸಿದ್ದಪ್ಪ ಕರಂಡಿ, ಪ್ರಮೋದ್, ವಿನಯ್ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ತಂಡವು ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜಾನುವಾರು ಕಳ್ಳತನದಲ್ಲಿ ತೊಡಗಿಕೊಂಡಿತ್ತು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.