ಚೈತ್ರ ಕುಂದಾಪುರ ಡೀಲ್ ಪ್ರಕರಣ | ಜಿಲ್ಲೆಯ ವಿವಿದ ಕಡೆ ಸ್ಥಳ ಮಹಜರು ಮುಗಿಸಿದ ಸಿಸಿಬಿ ಪೊಲೀಸರು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಜಿಲ್ಲೆಯ ವಿವಿದ ಕಡೆ ಸ್ಥಳ ಮಹಜರು ನಡೆಸಿದ್ದಾರೆ.

ಇದನ್ನೂ ಓದಿ; ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು

ವಂಚನೆಗೊಳಗಾದ ಗೋವಿಂದ ಬಾಬು ಪೂಜಾರಿಯನ್ನು ಹಾಗೂ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಲ್ಲಿ ಓರ್ವನಾದ ಗಗನ್ ಕಡೂರುನನ್ನು ಇಂದು ಬೆಳಗ್ಗೆ ಚಿಕ್ಕಮಗಳೂರು ಪ್ರವಾಸಿ ಮಂದಿರಕ್ಕೆ ಕರೆತಂದಿದ್ದರು, ವಂಚನೆ ಪ್ರಕರಣದ ಪ್ರಮುಖ ಸಭೆಗಳು ನಡೆದಿದೆ ಎನ್ನಲಾದ ಚಿಕ್ಕಮಗಳೂರಿನ ಐಬಿಗೆ ಸ್ಥಳ ಪರಿಶೀಲನೆಗಾಗಿ ಗಗನ್ ಕಡೂರುನನ್ನು ಕರೆದುಕೊಂಡು ಬಂದಿದ್ದರು.

ಇದನ್ನೂ ಓದಿ; ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ

ಚಿಕ್ಕಮಗಳೂರಿನ ಇದೇ ಪ್ರವಾಸಿ ಮಂದಿರದಲ್ಲಿ ಮೀಟಿಂಗ್ ನಡೆದ ಬಳಿಕ ವಿಶ್ವನಾಥ್ ಜೀ ಬೇಡಿ ಮಾಡಿಸಿದ್ದ ಚೈತ್ರ ಗ್ಯಾಂಗ್ ಈ ನಿಟ್ಟಿನಲ್ಲಿ ಸಿಸಿಬಿ ತಂಡ ಸ್ಥಳ ಮಹಜರು ನಡೆಸಿದ್ದು, ಇದಾದ ಬಳಿಕ ಗಗನ್ ಮನೆಗೂ ತೆರಳಿ ಮಾಹಿತಿ ಸಂಗ್ರಹಿಸಿದ್ದು, ಅದಾದ ಬಳಿಕ ಕೆ.ಎಂ.ರಸ್ತೆಯಲ್ಲಿರಯವ ಹೆಚ್.ಡಿ.ಎಫ್.ಸಿ. ಬ್ಯಾಂಕ್ ನ ಅಕೌಂಟ್ ನಲ್ಲಿ ಹಣ ವರ್ಗಾವಣೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ. ನಗರದ ದೊಡ್ಡಪೇಟೆಯಲ್ಲಿರುವ ಕಟಿಂಗ್ ಶಾಪ್ ಗೂ ತೆರಳಲಿ ಪರಿಶೀಲನೆ ನಡೆಸಿದ್ದಾರೆ.

ಇದೀಗ ಸ್ಥಳ ಮಹಜರು ಮುಗಿಸಿ ಕಡೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದಾರೆ ಎನ್ನಲಾಗಿದೆ.

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಹೆಚ್ಚುತ್ತಿರುವ ಅಪಘಾತ | ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೆಡ್ ಅಳವಡಿಕೆ

ಮೂಡಿಗೆರೆ:  (ನ್ಯೂಸ್ ಮಲ್ನಾಡ್ ವರದಿ) ಉತ್ತಮ ಗುಣಮಟ್ಟದ ರಸ್ತೆಗಳಿದ್ದರೂ ಸಹ ಚಾರ್ಮಾಡಿ ಘಾಟಿಯಲ್ಲಿ ಮಂಜು ಕವಿದ ವಾತಾವರಣ ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸುವುದರ ಜೊತೆಗೆ ತಾಳ್ಮೆಯಿಂದ ವಾಹನ ಚಾಲನೆ ಮಾಡಬೇಕು ಎಂದು ಪಿ.ಎಸ್.ಐ ಜಂಬೂರಾಜ್ ಮಹಾಜನ್ ತಿಳಿಸಿದರು.

ಇದನ್ನೂ ಓದಿ; HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?

ಶನಿವಾರ ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಅಪಘಾತ ತಡೆಗಟ್ಟಲು ಬ್ಯಾರಿಕೆಡ್ ಗಳನ್ನು ಅಳವಡಿಸಲಾಯಿತು. ಯುವಕರು ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ಚಾರ್ಮಾಡಿ ಘಾಟಿಯ ತಿರುವಿನ ಬಳಿ ರಸ್ತೆ ಬದಿಯ ಮೋರಿಗಳು ಬಿರುಕು ಬಿಟ್ಟಿದೆ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಮುಂಜಾಗ್ರತಾ ಕ್ರಮವನ್ನು ಬಣಕಲ್ ಪೊಲೀಸರು ಕೈಗೊಂಡರು. ಬಸ್ ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದರು.

ಈ ಸಂದರ್ಭದಲ್ಲಿ ಬಣಕಲ್ ಠಾಣೆಯ ಎ.ಎಸ್.ಐ ಶಶಿ, ಜಗದೀಶ್, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.