ಶೃಂಗೇರಿ ಕ್ಷೇತ್ರದ ಕೊಪ್ಪ ತಾಲೂಕಿನ ಕೆಸವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 28/12/25 ಭಾನುವಾರ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ದಿನಾಚರಣೆಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ (DSS) ನೂತನ ಶಾಖೆಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಡಿ. ರಾಮು ವಹಿಸಿದ್ದರು. ನೂತನ ಶಾಖೆಯನ್ನು ಕೊಪ್ಪ ಕೆಎಸ್ಪಿಎಸ್ ಪೊಲೀಸ್ ಉಪ ದೀಕ್ಷಕರಾದ ಬಾಲಾಜಿ ಸಿಂಗ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೊಪ್ಪ ಪೊಲೀಸ್ ಉಪ ನಿರೀಕ್ಷಕರಾದ ಬಸವರಾಜ್ ಜಿ.ಕೆ. ಉಪಸ್ಥಿತರಿದ್ದರು.
ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿ.ಟಿ. ರಂಗನಾಥ್ ಅವರು ಅನಾರಹರಣ ನೆರವೇರಿಸಿದರು. ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಎಲ್.ಎಫ್. ಶ್ರೀಕಾಂತ್ ಮಂಡಿಸಿದರು. ಅರಣ್ಯ ಇಲಾಖೆಯ ವಲಯಾಧಿಕಾರಿಯಾದ ಜಿ.ಟಿ. ರಂಗನಾಥ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ
ಕಾರ್ಯಕ್ರಮದಲ್ಲಿ ಕೆಸವೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹೇಂದ್ರ ಸ್ವಾಮಿ, ಉಪಾಧ್ಯಕ್ಷರಾದ ರಶ್ಮಿ ಜಿ.ಡಿ., ಸದಸ್ಯರಾದ ಕಸ್ತೂರಿ ಮತ್ತು ಪ್ರವೀಣ್ ಉಪಸ್ಥಿತರಿದ್ದರು. ಜೊತೆಗೆ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮಹಿಳಾ ಸಂಚಾಲಕರಾದ ಪವಿತ್ರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಗಿಣಿ, ಜಿಲ್ಲಾ ಮಹಿಳಾ ಕಾರ್ಯದರ್ಶಿ ವಿಮಲಾ, ಶೃಂಗೇರಿ ಕ್ಷೇತ್ರ ಸಂಚಾಲಕರಾದ ಪಿಕಪ್ ಚಂದ್ರು, ಎನ್.ಆರ್.ಪುರ ಆಶಾ ನಗರ ಸಂಚಾಲಕರಾದ ಸುಧಾಕರ್, ನಾಗಪುರ ಸಂಚಾಲಕರಾದ ಲಾರೆನ್ಸ್ ಮೆಣಸೂರು ಹಾಗೂ ಕೆಸವೆಯ ನೂತನ ಶಾಖೆಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮವು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು ಹಾಗೂ ಸಾಮಾಜಿಕ ನ್ಯಾಯದ ಮಹತ್ವವನ್ನು ಸ್ಮರಿಸುವ ಮೂಲಕ ಯಶಸ್ವಿಯಾಗಿ ನಡೆಯಿತು.












