ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ. ಮಧು(28) ಮೃತಪಟ್ಟ ಕಾನ್ಸ್ಟೇಬಲ್.
ಇದನ್ನೂ ಓದಿ: 60% ಅಂಕ ಪಡೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್

ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು. ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಎಚ್ಚರಿಕೆ; ಪಿಎಂ ಕಿಸಾನ್ ಹಣ 110 ಕೋಟಿ ವಂಚನೆ!
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ












