
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಇಂದು ಮುಂಜಾನೆ ಬೃಹತ್ ಗಾತ್ರದ ಟ್ರಕ್ ಒಂದು ಸಿಲುಕಿಕೊಂಡು ಸುಮಾರು ಎರಡು ತಾಸು ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.
ಇದನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ

ಚಿಕ್ಕಮಗಳೂರು ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ಟ್ರಕ್, ಹತ್ತನೇ ತಿರುವಿನಲ್ಲಿ ಸಿಲುಕಿಕೊಂಡಿತ್ತು. ಈ ರಸ್ತೆಯಲ್ಲಿ ಬೃಹತ್ ಗಾತ್ರದ ವಾಹನಗಳಿಗೆ ನಿಷೇಧವಿದ್ದರೂ, ಟ್ರಕ್ ಕೊಟ್ಟಿಗೆಹಾರ ಚೆಕ್ ಪೋಸ್ಟ್ ತಪ್ಪಿಸಿ ಬಂದಿರುವುದು ವಿಪರ್ಯಾಸವಾಗಿದೆ. ಹೀಗಾಗಿ ಚೆಕ್ಪೋಸ್ಟ್ ಸಿಬ್ಬಂದಿಗಳ ವಿರುದ್ಧ ವಾಹನ ಸವಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ













