Charmadi Ghat: ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದ ಕಾರಣದಿಂದಾಗಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.
ಇದನ್ನೂ ಓದಿ; ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?

ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೋ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅದೃಷ್ಟವಶಾತ್ ಬೊಲೆರೋ ವಾಹನದಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ; ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
ಇನ್ನೊಂದೆಡೆ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಕಿರಿದಾದ ದಾರಿಯಲ್ಲಿ ಸಂಭವಿಸಿದೆ. ಮಂಜು ಮುಸುಕಿದ್ದರಿಂದ ದಾರಿ ಕಾಣದೇ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್, ಧರ್ಮಸ್ಥಳದಿಂದ ಧಾರವಾಡಕ್ಕೆ ಸಾಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿ ತಡೆಗೋಡೆ ಕುಸಿದಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.


ಇದನ್ನೂ ಓದಿ; ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ
ಇನ್ನು ಚಾರ್ಮಾಡಿ ಘಾಟಿಯಲ್ಲಿ (Charmadi Ghat:) ದಟ್ಟ ಮಂಜು ಕವಿದ ವಾತಾವರಣವಿದ್ದು ಈ ಹಿನ್ನಲೆಯಲ್ಲಿ ಇನ್ನಷ್ಟು ಅಪಾಯವಾಗುವ ಸಾಧ್ಯತೆಯಿದ್ದು ಪ್ರಯಾಣಿಕರು ಎಚ್ಚರಿಕೆಯಿಂದ ಸಂಚರಿಸಬೇಕಾಗಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-08.09.2023
Chikkamagaluru: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ, ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ನಲ್ಲಿ ಬುಧವಾರ ಸಂಜೆ ನಡೆದಿದೆ.
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನಿರಂಜನ್(47), ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಢಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಶಾಲಾ ಮಕ್ಕಳ ಮೇಲೆ ಹರಿದ ಬಸ್ | ಓರ್ವ ವಿದ್ಯಾರ್ಥಿನಿ ಸಾವು, ಒಬ್ಬರು ಗಂಭೀರ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಚಲಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು, ಅದರಲ್ಲಿ ಓರ್ವ ವಿದ್ಯಾರ್ಥಿ ಇದೀಗ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ಬಳಿ ನಡೆದಿದೆ.
ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ಏಕಾಏಕಿ ಮಕ್ಕಳ ಮೇಲೆ ಹರಿದಿದೆ. ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದರು, ಆದರೆ ತುಳಸಿ (15) ಹಾಗೂ ನಿವೇದಿತ (14) ಸ್ಥಿತಿ ಗಂಭೀರವಾಗಿ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾಳೆ.
ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತುಳಸಿ, ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು-ಲತಾ ದಂಪತಿಯ ಪುತ್ರಿಯಾಗಿದ್ದಾಳೆ.












